Wednesday, 25th December 2024

Physical Abuse: ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿ ಮೇಲೆ ಅತ್ಯಾಚಾರ; ಕಾಮುಕ ಅರೆಸ್ಟ್‌

Physical Abuse

ಮಂಗಳೂರು: ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿ ಮೇಲೆ ಕಾಮುಕನೊಬ್ಬ ಶಾಲೆಯ ಕೊಠಡಿಯಲ್ಲೇ ಅತ್ಯಾಚಾರ ಎಸಗಿರುವ ಘಟನೆ (Physical Abuse) ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ನಾವೂರು ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ತಾಲೂಕಿನ ನಿವಾಸಿ ಜಯಂತ ಎಂಬಾತ ಬಂಧಿತ ಕಾಮುಕನಾಗಿದ್ದಾನೆ.

ಕಳೆದ ವಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವಿತ್ತು. ವಾರ್ಷಿಕೋತ್ಸವ ನೋಡಲು ಮನೆಯವರೊಂದಿಗೆ ಯುವತಿ ಶಾಲೆಗೆ ಬಂದಿದ್ದಳು. ಈ ವೇಳೆ ಆರೋಪಿ ಜಯಂತ ಶಾಲಾ ಕೊಠಡಿಯಲ್ಲಿ ಯುವತಿಯನ್ನು ಕೂಡಿ ಹಾಕಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ಆಕೆ ರಕ್ಷಣೆಗೆ ಕೂಗಿಕೊಂಡರೂ ಬಿಟ್ಟಿರಲಿಲ್ಲ. ಈ ಬಗ್ಗೆ ಯುವತಿಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಳು.

ಪ್ರಕರಣ ದಾಖಲಿಸಿಕೊಂಡ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಆರೋಪಿಯು ಜೈಲು ಸೇರಿದ್ದಾನೆ.

ಈ ಸುದ್ದಿಯನ್ನೂ ಓದಿ | Viral Video: ಹುಟ್ಟುಹಬ್ಬದಂದು ಪಿಸ್ತೂಲ್‌ ಹಿಡಿದು ಹುಚ್ಚಾಟ; ಯುವಕನ ಶೋಕಿಗೆ ಖಾಕಿಯಿಂದ ಭರ್ಜರಿ ʻಗಿಫ್ಟ್‌ʼ

ವಂಚನೆ ಕೇಸ್‌ನಲ್ಲಿ ವಿಚಾರಣೆಗೆ ಹಾಜರಾದ ವರ್ತೂರು ಪ್ರಕಾಶ್; ಬಂಧನ ಭೀತಿ

Varthur Prakash

ಬೆಂಗಳೂರು: ಚಿನ್ನದ ವ್ಯಾಪಾರಿಗೆ 2.42 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ವರ್ತೂರ್‌ ಪ್ರಕಾಶ್‌ಗೆ (Varthur Prakash) ಸಂಕಷ್ಟ ಎದುರಾಗಿದೆ. ಪ್ರಕರಣದಲ್ಲಿ ಅವರು ಪೊಲೀಸರ ಎದುರು ವಿಚಾರಣೆಗಾಗಿ ಮಂಗಳವಾರ ಹಾಜರಾಗಿದ್ದು, ಬಂಧನ ಭೀತಿ ಎದುರಾಗಿದೆ.

ಪ್ರಕರಣದಲ್ಲಿ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಾಗಲಗುಂಟೆ ನಿವಾಸಿ ಶ್ವೇತಾ ಗೌಡ ಅವರನ್ನು ಬಂಧಿಸಿದ್ದರು. ಅವರಿಂದ ಚಿನ್ನ, ಕಾರು ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿತ್ತು. ಆರೋಪಿ ವಿಚಾರಣೆ ವೇಳೆ ವರ್ತೂರ್ ಪ್ರಕಾಶ್ ಅವರ ಹೆಸರು ಬಾಯಿಟ್ಟಿದ್ದರು. ಆರೋಪಿ ಹೇಳಿಕೆ ಆಧರಿಸಿ ಪ್ರಕಾಶ್ ಅವರಿಗೆ ಮೂರು ಬಾರಿ ನೋಟಿಸ್ ನೀಡಲಾಗಿತ್ತು. ಮಂಗಳವಾರ ಬೆಳಗ್ಗೆ ವಿಚಾರಣೆಗೆ ಪ್ರಕಾಶ್ ಹಾಜರಾಗಿದ್ದು, ಎಸಿಪಿ ಗೀತಾ ಅವರ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಇನ್ನು ತಾನು ವಂಚಿಸಿ ಸಂಪಾದಿಸಿದ್ದ ಚಿನ್ನದಲ್ಲಿ ವರ್ತೂರು ಪ್ರಕಾಶ್ ಅವರಿಗೆ ಸಹ ಪಾಲು ಕೊಟ್ಟಿದ್ದೇನೆ. ನನಗೆ ಚಿನ್ನದ ವ್ಯಾಪಾರಿ ಸಂಜಯ್ ಬಾಪ್ನ ಅವರನ್ನು ಮಾಜಿ ಸಚಿವರೇ ಪರಿಚಯಿಸಿದ್ದರು ಎಂದು ವಿಚಾರಣೆ ವೇಳೆ ಆರೋಪಿ ಶ್ವೇತಾಗೌಡ ಹೇಳಿಕೆ ನೀಡಿದ್ದಳು ಎನ್ನಲಾಗಿದೆ.

6 ತಿಂಗಳ ಹಿಂದೆ ಫೇಸ್‌ಬುಕ್‌ನಲ್ಲಿ ಶ್ವೇತಾಗೌಡಳಿಗೆ ವರ್ತೂರು ಪ್ರಕಾಶ್ ಪರಿಚಯವಾಗಿದ್ದರು. ತಾನಾಗಿಯೇ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಮಾಜಿ ಸಚಿವರನ್ನು ಸ್ನೇಹದ ಬಲೆಗೆ ಶ್ವೇತಾ ಬೀಳಿಸಿಕೊಂಡಿದ್ದಳು. ಬಳಿಕ ಫೇಸ್‌ಬುಕ್ ಮೆಸೆಂಜರ್‌ನಲ್ಲಿ ಪರಸ್ಪರ ಚಾಟಿಂಗ್ ಶುರುವಾಗಿದ್ದು, ಬಳಿಕ ಇಬ್ಬರ ನಡುವೆ ಮೊಬೈಲ್ ಸಂಖ್ಯೆ ವಿನಿಮಯವಾಗಿ ವಾಟ್ಸ್‌ ಆ್ಯಪ್‌ ಮಾತುಕತೆ ಮುಂದುವರಿದಿತ್ತು ಕಳೆದ ನಾಲೈದು ತಿಂಗಳಿಂದ ಶ್ವೇತಾ ಹಾಗೂ ವರ್ತೂರು ಪ್ರಕಾಶ್ ನಡುವೆ ಆತ್ಮೀಯ ಒಡನಾಟವಿತ್ತು ಎನ್ನಲಾಗಿದೆ. ಹೀಗಾಗಿಯೇ ಮಾಜಿ ಸಚಿವರ ಹೆಸರೇಳಿಕೊಂಡು ಚಿನ್ನದ ವ್ಯಾಪಾರಿಗೆ ಮಹಿಳೆ ವಂಚಿಸಿದ್ದಾಳೆ.

ಈ ಸುದ್ದಿಯನ್ನೂ ಓದಿ | Robber Arrested: ದರೋಡೆ, ಕೊಲೆ ಪ್ರಕರಣ; ಬರೋಬ್ಬರಿ 21 ವರ್ಷಗಳ ನಂತರ ಆರೋಪಿ ಅರೆಸ್ಟ್!