Saturday, 26th October 2024

Tumkur Crime: ಕಲುಷಿತ ನೀರು ಸೇವನೆ: ಇಬ್ಬರು ಸಾವು

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಸೋರಲಮಾವು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟಿ ರುವ ಘಟನೆ ಸಂಭವಿಸಿದ್ದು ಗ್ರಾಮದಲ್ಲಿ ಆತಂಕ ಎದುರಾಗಿದೆ.

ಕಳೆದ ಎರಡ್ಮೂರು ದಿನಗಳ ಅಂತರದಲ್ಲಿ ವಾಂತಿ ಭೇದಿಯಿಂದ ಬಾಲಕಿ, ವೃದ್ಧೆ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಮಂದಿ ವಿವಿಧ ಅಸ್ವಸ್ಥರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಲುಷಿತ ನೀರು ಸೇವಿಸಿ ಗುಂಡಮ್ಮ (60), ಭುವನೇಶ್ವರಿ (10) ವಾಂತಿ, ಭೇದಿಯಿಂದ ಸಾವನ್ನಪ್ಪಿದ್ದರು. ಗ್ರಾಮದ ರತ್ನಮ್ಮ ಎಂಬುವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹಾಸನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮದಲ್ಲಿರುವ ಮಿನಿ ನೀರಿನ ಟ್ಯಾಂಕ್‌ನಿಂದ ಕುಡಿಯುವ ನೀರು ಪೂರೈಸಲಾಗುತ್ತಿದೆ. ಇದೇ ನೀರು ಕುಡಿದು ಅಸ್ವಸ್ಥರಾಗಿದ್ದಾರೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಸೊರಲಮಾವು ಗ್ರಾಮಕ್ಕೆ ತಹಸಿಲ್ದಾರ್, ತಾಲೂಕು ಆರೋಗ್ಯಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು, ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ವರದಿ ನೀಡುವಂತೆ ತಾಲೂಕು ಆಡಳಿತಕ್ಕೆ ಸೂಚಿಸಿದ್ದು, ಆರೋಗ್ಯದಲ್ಲಿ ಏರುಪೇರಾಗಿರುವ ಮಂದಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದರೂ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿಲ್ಲ. ಆರೋಗ್ಯ ಇಲಾಖೆಯ ನಿರ್ಲಕ್ಷವೇ ಇಂತಹ ಪ್ರಕರಣಗಳು ಸಂಭವಿಸಲು ಕಾರಣವಾಗಿದೆ. ಕೂಡಲೇ ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಜನರಲ್ಲಿ ಆತಂಕ ದೂರ ಮಾಡಬೇಕಾಗಿದೆ.

ಇದನ್ನೂ ಓದಿ: Terror Attack: ಕಾಶ್ಮೀರದಲ್ಲಿ ಉಗ್ರರಿಂದ ಭೀಕರ ಹತ್ಯಾಕಾಂಡ; ವೈದ್ಯ, ಐವರು ವಲಸಿಗ ಕಾರ್ಮಿಕರು ಸೇರಿ 6 ಮಂದಿ ಬಲಿ