Thursday, 12th December 2024

ಬಿಎಸ್ ಯಡಿಯೂರಪ್ಪ ವಿರುದ್ಧ ಫೋಕ್ಸೋ ಪ್ರಕರಣ: CID ತನಿಖೆ..?

ಬೆಂಗಳೂರು: ಅಪ್ರಾಪ್ತೆ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಘಟನೆ ಸ್ಥಳಕ್ಕೆ ತನಿಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಪ್ರಾಥಮಿಕ ತನಿಖೆ ಸಾಕ್ಷಿಗಳ ಸಂಗ್ರಹ ಮಾಡಲಾಗುತ್ತಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ನ ನಿರ್ದೇಶನದಂತೆ ಗೈಡ್ ಲೈನ್ಸ್ ಹಾಗೂ ಕಾನೂನಿನ ಪ್ರಕಾರ ತನಿಖೆ ನಡೆಸಲಾಗುತ್ತಿದೆ. ಕೃತ್ಯ ನಡೆದ ಸ್ಥಳ ಎಂದು ಆರೋಪಿಸಲಾದ ಕಡೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಸಿಗಬಹುದಾದ ಸಾಕ್ಷಿಗಳ ಬಗ್ಗೆ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತಿದೆ.

ಈ ನಡುವೆ CID ತನಿಖೆಗಾಗಿ, ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಿದೆ ಎನ್ನಲಾಗಿದ್ದು, ಈ ಬಗ್ಗೆ ಇಂದು ಸಂಜೆಯೊಳಗೆ ಆದೇಶವನ್ನು ಹೊರಡಿಸಲಾಗುವುದು ಎನ್ನಲಾಗಿದೆ.