ಸಿಎಂ ಮತ್ತು ಡಿಸಿಎಂ ಸೇರಿದಂತೆ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆ ಪ್ರದೀಪ್ ಈಶ್ವರ್ ಬೆಂಗಳೂರಿನಲ್ಲಿದ್ದರು. ಇನ್ನು ವಿಷಯ ತಿಳಿಯುತ್ತಿದ್ದಂತೆ ಪ್ರದೀಪ್ ಈಶ್ವರ್ ಪೇರೇಸಂದ್ರದತ್ತ ತೆರಳುತ್ತಿದ್ದಾರೆ. ಪೇರೇಸಂದ್ರ ಗ್ರಾಮಕ್ಕೆ ತೆರಳಿ ತಾಯಿ ರತ್ನಮ್ಮ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.
ಪ್ರದೀಪ್ ಈಶ್ವರ್ ಅವರು ಜೀವಶಾಸ್ತ್ರ ಉಪನ್ಯಾಸಕರಾಗಿದ್ದಾರೆ. ಜೊತೆಗೆ ಪ್ರದೀಪ್ ಅತ್ಯುತ್ತಮ ಮೋಟಿವೇಷನಲ್ ಸ್ಪೀಕರ್ ಆಗಿದ್ದಾರೆ. ಪ್ರದೀಪ್ ಈಶ್ವರ್ ಅವರು, ಪರಿಶ್ರಮ ಅಕಾಡೆಮಿಯನ್ನು ಪ್ರಾರಂಭಿಸುವ ಮೊದಲು, ಭಾರತದ ಉದ್ದಗಲಕ್ಕೂ ಸಂಚರಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.
ರಾಜ್ಯದಲ್ಲೂ MBBS ಸೀಟುಗಳನ್ನು ಪಡೆಯಲು ನೂರಾರು ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ್ದಾರೆ. ಅವರ ವಿದ್ಯಾರ್ಥಿಗಳು ಭಾರತದ ಬಹುತೇಕ ಉನ್ನತ ವೈದ್ಯಕೀಯ ಕಾಲೇಜುಗಳಲ್ಲಿ ಸೀಟ್ ಪಡೆದು ಓದುತ್ತಿದ್ದಾರೆ.