ಬೆಂಗಳೂರು : ಜೂ.10 ರವರೆಗೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಗುರುವಾರ ಪ್ರಜ್ವಲ್ ಕಸ್ಟಡಿ ಅಂತ್ಯಗೊಳ್ಳಲಿದ್ದು, ಈ ಹಿನ್ನೆಲೆ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಜೂ.10 ರವರೆಗೆ ಎಸ್ ಐ ಟಿ ಕಸ್ಟಡಿಗೆ ನೀಡಿದೆ. ಪ್ರಜ್ವಲ್ ರೇವಣ್ಣರನ್ನು 1 ವಾರ ಅಂದರೆ ಜೂನ್ 6 ವರೆಗೆ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಂಗಳೂರಿನ 42 ಎಸಿಎಂಎಂ ಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು.
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ನಂತರ ವಿದೇಶದಿಂದ ಆಗಮಿಸಿದ್ದು, ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿದೆ.