Friday, 20th September 2024

ಐದನೇ ಬಾರಿಗೆ ಗೆದ್ದು ದಾಖಲೆ ಬರೆದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ

ಧಾರವಾಡ : ಧಾರವಾಡ ಕ್ಷೇತ್ರದಲ್ಲೇ ಸತತ ಐದನೇ ಬಾರಿಗೆ ಗೆದ್ದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ದಾಖಲೆ ಬರೆದಿದ್ದಾರೆ.

80 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ಕ್ಷೇತ್ರದ ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ. ಮೈತ್ರಿ ಅಭ್ಯರ್ಥಿಗಳನ್ನು ಆಶೀರ್ವದಿಸಿದ ಜನತೆಗೆ ಧನ್ಯವಾದ. ಎನ್​​ಡಿಎ ಸರ್ಕಾರದ ಬಗ್ಗೆ ಸಾಕಷ್ಟು ಅಪಪ್ರಚಾರ ನಡೆಸಲಾಗಿತ್ತು. ಅಪಪ್ರಚಾರದ ನಡುವೆ ಎನ್​ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ಮೋದಿ ನೇತೃತ್ವದ ಸರ್ಕಾರ ರಚನೆಗೆ ಬಹುಮತ ಬರಲಿದೆ ಎಂದರು.

ಕರ್ನಾಟಕದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯಗೆ ತೀವ್ರ ಹಿನ್ನಡೆಯಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿ. ಶ್ರೀರಾಮಲು ಹೀನಾಯವಾಗಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಇ.ತುಕಾರಾಮ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌ ಆಗಿದ್ದು, ಪ್ರಜ್ವಲ್‌ ರೇವಣ್ಣ ಹೀನಾಯವಾಗಿ ಸೋಲನುಭವಿಸಿದ್ದಾರೆ. ಶ್ರೇಯಸ್‌ ಪಟೇಲ್‌ ಹಾಸನ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಇಲ್ಲಿಯವರೆಗೆ ಬಿಜೆಪಿ 238, ಕಾಂಗ್ರೆಸ್ 97, ಎಸ್‌ಪಿ 33, ಟಿಎಂಸಿ 29, ಡಿಎಂಕೆ 21, ಜೆಡಿಯು 15, ಎಸ್‌ಎಸ್ (ಉದ್ಧವ್ ಠಾಕ್ರೆ ಬಣ) 10, ಎಸ್‌ಎಸ್ ಶಿಂಧೆ 6, ಟಿಡಿಪಿ 16, ವೈಎಸ್‌ಆರ್‌ಸಿಪಿ 4, ಎಎಪಿ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.