Thursday, 12th December 2024

ಆಪರೇಷನ್ ಥಿಯೇಟರ್ ನಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್: 38 ವಿದ್ಯಾರ್ಥಿಗಳು ಅಮಾನತು

ದಗ: ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ವೈದ್ಯನೊಬ್ಬ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿದ ಘಟನೆ ಸಾಮಾಜಿಕ ಜಾಲತಾಣ ದಲ್ಲಿ ಹರಿದಾಡಿದ ಬೆನ್ನಲ್ಲೇ ಗದಗದ ಜಿಮ್ಸ್ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿಗಳು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಪೇಚಿಗೆ ಸಿಲುಕಿದ್ದಾರೆ.

ರೋಗಿಗಳ ಎದುರಲ್ಲೇ ಕನ್ನಡ, ತಮಿಳು, ತೆಲುಗು, ಹಿಂದಿ ಹಾಡುಗಳಿಗೆ ವೈದ್ಯಕೀಯ ವಿದ್ಯಾರ್ಥಿಗಳು ಡ್ಯಾನ್ಸ್ ಮಾಡಿದ್ದಾರೆ. ಇದು ವೈರಲ್ ಆಗುತ್ತಿದ್ದಂತೆ ಜಿಮ್ಸ್ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ ಅವರು 38 ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತು ಮಾಡಿ ಆದೇಶಿಸಿದ್ದಾರೆ.

‘ಪ್ರೇಮಲೋಕ’ ಸೇರಿದಂತೆ ಅನೇಕ ಚಿತ್ರಗಳ ಹಾಡಿಗೆ ವಿದ್ಯಾರ್ಥಿಗಳು ಹೆಜ್ಜೆ ಹಾಕಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕ, ಶಿಶು ಆರೈಕೆ ಕೇಂದ್ರ, ಚೀಟಿ ಬರೆಯುವ ಸ್ಥಳದಲ್ಲಿ ಡ್ಯಾನ್ಸ್ ಮಾಡಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹುಚ್ಚಾಟಕ್ಕೆ ಬೇರೆ ಜಾಗ ಸಿಗಲಿಲ್ಲವೇ ಎಂದು ಆಕ್ರೋಶ ವ್ಯಕ್ತವಾಗಿದೆ.