ತುಮಕೂರು: ಮಹಾತ್ಮ ಗಾಂಧೀಜಿ ಭೇಟಿ ನೀಡಿದ್ದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಯಡಿ ಅಭಿವೃದ್ಧಿಪಡಿಸಿರುವ ಆಲದಮರದ ಪಾರ್ಕ್ ಅನ್ನು ಉತ್ತಮ ನಿರ್ವಹಣೆ ಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರೆಸ್‌ಕ್ಲಬ್ ತುಮಕೂರು ಪದಾಧಿಕಾರಿಗಳಿಗೆ ಮೇ ೧೬ ರಂದು ಬೆಳಗ್ಗೆ ೧೨.೨೦ಕ್ಕೆ ಹಸ್ತಾಂತರ ಮಾಡಲಿದ್ದಾರೆ.
ಪ್ರೆಸ್‌ಕ್ಲಬ್ ಅಧ್ಯಕ್ಷ ಶಶಿಧರ್ ಎಸ್. ದೋಣಿಹಕ್ಲು, ಪ್ರಧಾನ ಕಾರ್ಯದರ್ಶಿ ಯೋಗೇಶ್, ಪದಾಧಿಕಾರಿಗಳು , ನಿರ್ದೇಶಕರು ಉಪಸ್ಥಿತರಿರು ವರು. ನಂತರ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯಪುಸ್ತಕ ವಿತರಣೆ ಹಾಗೂ ಕಲಿಕಾ ಚೇತರಿಕೆ ವರ್ಷದ ಪ್ರಾರಂಭೋತ್ಸವಕ್ಕೆ ಎಂಪ್ರೆಸ್ ಪಬ್ಲಿಕ್ ಶಾಲೆಯಲ್ಲಿ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸಚಿವರಾದ ಅರಗ ಜ್ಞಾನೇಂದ್ರ, ಜೆ.ಸಿ. ಮಾಧುಸ್ವಾಮಿ, ಬಿ.ಸಿ. ನಾಗೇಶ್ ಉಪಸ್ಥಿತರಿರುವರು.
ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸರ್ಕಾರಿ ಮುಖ್ಯ ಸಚೇತಕ ಡಾ. ವೈ.ಎ ನಾರಾಯಣ ಸ್ವಾಮಿ, ಸಂಸದರಾದ ಜಿ.ಎಸ್. ಬಸವರಾಜು, ಮತ್ತು ಡಿ.ಕೆ. ಸುರೇಶ್ ಮತ್ತು ಜಿಲ್ಲೆಯ ಎಲ್ಲ ಶಾಸಕರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿ ದ್ದಾರೆ.
ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಾಕೇಶ್ ಸಿಂಗ್, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಸಾ.ಶಿ.ಇ ಆಯುಕ್ತರಾದ ಡಾ. ಆರ್.ವಿಶಾಲ್, ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರಾದ ಪಲ್ಲವಿ ಅಕುರಾತಿ ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ. ವೈಎಸ್. ಪಾಟೀಲ, ಜಿ.ಪಂ. ಸಿಇಒ ಡಾ. ಕೆ. ವಿದ್ಯಾ ಕುಮಾರಿ, ಎಸ್ಪಿ ರಾಹುಲ್‌ಕುಮಾರ್ ಶಹಪೂರ್ ವಾಡ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.