ರಾಯಚೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ, ಭ್ರಷ್ಟಾಚಾರ ಹಾಗೂ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎ೦ದು ಒತ್ತಾಯಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ( ಕಮ್ಯುನಿಸ್ಟ್) ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿಕ್ಕೆ ಮನವಿ ಸಲ್ಲಿಸಿದರು.
ದೇಶದಲ್ಲಿ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಕೇಂದ್ರ ಸರ್ಕಾರ ಅಡುಗೆ ಅನಿಲ ದರ ನಿರಂತರವಾಗಿ ಏರಿಕೆ ಮಾಡುತ್ತಿದೆ. ಅಡುಗೆ ಅನಿಲ ದರ ₹1200 ಆಗಿದ್ದು ಪೆಟ್ರೊಲ್ , ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸುತ್ತಿದ್ದು, ಜನರ ಮೇಲೆ ಬರೆ ಎಳೆಯುತ್ತಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವಾ ಡುತ್ತಿದೆ. ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಉದ್ಯಮಿಗಳಿಗೆ ಲಾಭ ಮಾಡಿಕೊಡುತ್ತಿದೆ ಎಂದು ದೂರಿದರು.
ಚೆಗೆ ರಾಜ್ಯದಲ್ಲಿ ಪಿಎಸ್ ಐ, ಉಪನ್ಯಾಸಕರ, ಸಹಾಯಕ ಪ್ರಾಧ್ಯಾಪಕ ನೇಮಕಾತಿ ಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು ಬಡ, ಮಧ್ಯಮ ವರ್ಗದ ಯುವಕರಿಗೆ ಭರವಸೆ ಕಳೆದುಕೊಂಡು ಹತಾಶರಾಗಿದ್ದಾರೆ. ಸಚಿವ ಈಶ್ವರಪ್ಪನವರು ಶೇ 40 ರಷ್ಟು ಕಮಿಷನ್ ಆರೋಪ ಕೇಳಿಬಂದಿದ್ದು ಗುತ್ತಿಗೆದಾರ ಸಾವಿಗೆ ಕಾರಣವಾಗಿದ್ದು ಪ್ರತಿಯೊಂದಕ್ಕೂ ಲಂಚ ನೀಡುವ ಪರಿಸ್ಥಿತಿ ಎದುರಾಗಿದೆ. ರಾಜ್ಯ ಸರ್ಕಾರ ಮೂರು ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯ ಬೇಕು ಎಂದು ಒತ್ತಾಯಿಸಿದರು.
ಅಡುಗೆ ಅನಿಲ, ಇಂದನ ದರ ಕಡಿಮೆ ಮಾಡಬೇಕು. ಅಕ್ಕಿ, ಜೋಳ, ಗೋಧಿ, ಸೀಮೆಎಣ್ಣೆ, ಬೇಳೆ ಕಾಳುಗಳನ್ನು ಪಡಿತರ ವ್ಯವಸ್ಥೆಯಲ್ಲಿ ರಿಯಾಯಿತಿ ದರದಲ್ಲಿ ನೀಡಬೇಕು. ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕು. ಎನ್ಇಪಿ ವಾಪಸ್ ಪಡೆಯಬೇಕು. ಕಾರ್ಮಿಕ ಸಂಹಿತೆ ಹಿಂಪಡೆಯಬೇಕು. ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಸ್ ಯುಸಿಐ ಜಿಲ್ಲಾ ಕಾರ್ಯದರ್ಶಿ ಡಾ.ಚಂದ್ರಗಿರೀಶ, ವೀರೇಶ ಎನ್.ಎಸ್, ಚನ್ನಬಸವ ಜಾನೆಕಲ್, ಮಹೇಶ ಚೀಕಲಪರ್ವಿ, ಹಯ್ಯಾಳಪ್ಪ, ಮಲ್ಲನಗೌಡ, ಕಾರ್ತಿಕ್, ಮಹೇಶ ಇದ್ದರು.