Sunday, 15th December 2024

AICC ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತಯಾಚನೆ ಇಂದು

ದಾವಣಗೆರೆ : AICC ಪ್ರಧಾನ ಕಾರ್ಯದರ್ಶಿ ಆಗಿರುವ ಪ್ರಿಯಾಂಕಾ ಗಾಂಧಿ ಇಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಮತಯಾಚನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಎ ಐ ಸಿ ಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕ ಗಾಂಧಿ ಅವರು ದಾವಣಗೆರೆಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ದಾವಣಗೆರೆ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಪರ ಪ್ರಚಾರ ನಡೆಸಲಿದ್ದಾರೆ.

ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಮಧ್ಯಾಹ್ನ ಸಮಾವೇಶ ನಡೆಯಲಿದೆ. ಈ ಒಂದು ಬೃಹತ್ ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ, ರಣದಿಪ್ ಸಿಂಗ್ ಸುರ್ಜೆವಾಲಾ, ಮುಖ್ಯಮಂತ್ರಿ ಸಿದ್ದರಾಮಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.

ಇನ್ನೊಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರುಬ ಸಮಾಜದ ಪ್ರಮುಖರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಈಗಾಗಲೇ ಪಕ್ಷೇತರ ಅಭ್ಯರ್ಥಿಯಾಗಿ ಜಿಟಿ ವಿನಯ್ ಕುಮಾರ್ ಅವರು ಕ್ಷೇತ್ರದಲ್ಲಿ ಆ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಶಂ ಸಿದ್ದರಾಮಯ್ಯನವರು ಕುರುಬ ಸಮಾಜದ ಪ್ರಮುಖರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.