Wednesday, 18th September 2024

ವಿವಾದಾತ್ಮಕ ಹೇಳಿಕೆ: ಪ್ರೊ.ಭಗವಾನ್ ಹೆಸರಿಗೆ ಕೋಕ್

ಮೈಸೂರು: ಒಕ್ಕಲಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಖಾಸಗಿಯಾಗಿ ಏರ್ಪಡಿಸಿದ್ದ ದಸರಾ ಯುವ ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟಕರ ಪಟ್ಟಿಯಿಂದ ಪ್ರೊ.ಕೆ.ಎಸ್. ಭಗವಾನ್ ಅವರ ಹೆಸರನ್ನು ಕೈಬಿಡಲಾಗಿದೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ವತಿಯಿಂದ ವಿಜಯನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಸೋಮವಾರ ಯುವ ಕವಿಗೋಷ್ಠಿಯ ಉದ್ಘಾಟನೆಯನ್ನು ಸಾಹಿತಿ ಮತ್ತು ವಿಚಾರವಾದಿ ಪ್ರೊ. ಕೆ.ಎಸ್. ಭಗವಾನ್ ಅವರ ಬದಲಿಗೆ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ನಿರ್ದೇಶಕ ಹಾಗೂ ಸಾಹಿತಿ ಡಾ. ಡಿ.ಕೆ. ರಾಜೇಂದ್ರ ಉದ್ಘಾಟಿಸಿದರು.

ಇತ್ತೀಚಿಗೆ ನಡೆದ ಮಹಿಷಾ ದಸರಾ ಸಮಾರಂಭದಲ್ಲಿ ಒಕ್ಕಲಿಗ ಸಮುದಾಯದ ಕುರಿತು ಪ್ರೊ.ಕೆ.ಎಸ್. ಭಗವಾನ್ ಅವರು ಅವಹೇಳನಕಾರಿ ಹೇಳಿ ನೀಡಿದ ಕಾರಣ ಅವರ ವಿರುದ್ಧ ಒಕ್ಕಲಿಗ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಜೊತೆಗೆ ಅ.16 ನಡೆಯಲಿರುವ ದಸರಾ ಯುವ ಕವಿಗೋಷ್ಠಿಯ ಉದ್ಘಾಟನೆಗೆ ಆಗಮಿಸಲಿರುವ ಪ್ರೊ. ಕೆ.ಎಸ್. ಭಗವಾನ್ ಅವರ ವಿರುದ್ಧ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸುವ ನಿರ್ಧಾರ ಕೈಗೊಂಡಿದ್ದರು.

ಸಾಹಿತ್ಯ ವಲಯದ ಸೌಹಾರ್ದ ವಾತಾವರಣದ ರಕ್ಷಣೆ, ಸಾಮಾಜಿಕ ಸಾಮರಸ್ಯದ ಹಿತದೃಷ್ಟಿಯಿಂದ ಪ್ರೊ.ಕೆ.ಎಸ್. ಭಗವಾನ್ ಅವರ ನಿವಾಸಕ್ಕೆ ಭಾನುವಾರ ತೆರಳಿ ಅವರ ಜೊತೆ ಚರ್ಚೆ ಮಾಡಿ, ಬಿಗುವಿನ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟು, ಅವರ ಅವಗಾಹನೆಗೆ ತಂದು ಉದ್ಘಾಟಕರನ್ನು ಬದಲಾಯಿಸಲಾಗಿದೆ.

Leave a Reply

Your email address will not be published. Required fields are marked *