Saturday, 14th December 2024

ನಿವೃತ್ತ ಪ್ರಾಧ್ಯಾಪಕ ಪ್ರೊ.ಪಟ್ಟಾಭಿರಾಮ ಸೋಮಯಾಜಿ ನಿಧನ

ಮಂಗಳೂರು: ಸಾಮಾಜಿಕ ಚಿಂತಕ, ನಿವೃತ್ತ ಪ್ರಾಧ್ಯಾಪಕ ಪ್ರೊ. ಪಟ್ಟಾಭಿರಾಮ ಸೋಮಯಾಜಿ ಶನಿವಾರ ಇಹಲೋಕ ತ್ಯಜಿಸಿದ್ದಾರೆ.

ಮಂಗಳೂರು ನಗರದ ದೇರೆಬೈಲು ಕೊಂಚಾಡಿ ಬಳಿಯಿರುವ ಗಿರಿನಗರದಲ್ಲಿ ಒಂಟಿ ಯಾಗಿ ವಾಸವಿದ್ದ ಸೋಮಯಾಜಿಯ ಅವರು ಮನೆಯಲ್ಲಿ ಕೊನೆಯುಸಿರೆಳೆದಿರುವು ದಾಗಿ ತಿಳಿದು ಬಂದಿದೆ.

ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕ ರಾಗಿ ನಿವೃತ್ತರಾಗಿರುವ ಇವರು ಕೋಮು ಸೌಹಾರ್ದ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ದ್ದರು.

ಕೆಲ ಸಮಯದಿಂದ ಅನಾರೋಗ್ಯದಿಂದ‌ ಬಳಲುತ್ತಿದ್ದ ಪ್ರೊ.ಸೋಮಯಾಜಿ ಅವರು ಕೆಲ ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಶುಕ್ರವಾರ ರಾತ್ರಿ ಆಪ್ತರೊಡನೆ ಫೋನ್‌ನಲ್ಲಿ ಮಾತನಾಡಿದ್ದರು. ಆದರೆ ಶನಿವಾರ ಮನೆಯಿಂದ ಹೊರ ಬಾರದಿರುವುದನ್ನು ನೋಡಿ ನೆರೆಹೊರೆಯವರು ಪೊಲೀಸರರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಆಗಮಿಸಿ ಮನೆ ಬಾಗಿಲ ಅನ್ನು ಒಡೆದು ನೋಡಿದಾಗ ಅವರು ಮಲಗಿದಲ್ಲೇ ಕೊನೆಯುಸಿರೆಳೆದಿದ್ದುದು ಕಂಡು ಬಂದಿದೆ. ವಿಚ್ಛೇದಿತರಾಗಿ ಒಂಟಿಯಾಗಿ ವಾಸವಿರುವ ಅವರಿಗೆ ಮಕ್ಕಳಿಲ್ಲ. ಪಟ್ಟಾಭಿರಾಮ ಅವರಿಗೆ ಅಪಾರ ಶಿಷ್ಯವರ್ಗ ಇದ್ದು, ಪ್ರಾಧ್ಯಾಪಕರಾಗಿ ಜನಮನ್ನಣೆ ಗಳಿಸಿದ್ದರು.