Friday, 13th December 2024

ನಾಳೆ ನ್ಯಾಯಬೆಲೆ ಅಂಗಡಿ ಮಾಲೀಕರ ಪ್ರತಿಭಟನೆ

ತುಮಕೂರು: ಅನಧಿಕೃತವಾಗಿ ನ್ಯಾಯಬೆಲೆ ಅಂಗಡಿಗಳ ಮೇಲೆ ಕರ್ನಾಟಕ ರಾಷ್ಟ್ರ ಸಮಿತಿ  ಪಕ್ಷದ ಕಾರ್ಯಕರ್ತರುಗಳು ದಾಂಧಲೆ ಮಾಡಿ ತೊಂದರೆ ನೀಡುತ್ತಿರುವುದನ್ನು ಖಂಡಿಸಿ ಜಿಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರು ಮತ್ತು ಕೈಗಾಡಿ ಸೀಮೆ ಎಣ್ಣೆ ವಿತರಕರ ಸಂಘದ ವತಿಯಿಂದ ಅ. 18 ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿ ಕೊಳ್ಳಲಾಗಿದೆ.
ಜಿಲ್ಲಾ ಸರಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಕೆ. ಕೃಷ್ಣಪ್ಪ ಹಾಗೂ ಜಿಲ್ಲಾಧ್ಯಕ್ಷ ಟಿ.ಎ. ನಟರಾಜ್ ಅವರ ನೇತೃತ್ವದಲ್ಲಿ ಈ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.
ಈ ಪ್ರತಿಭಟನಾ ಮೆರವಣಿಗೆಯು ನಗರದ ಟೌನ್‌ಹಾಲ್ ವೃತ್ತದಿಂದ ಪ್ರಾರಂಭಗೊಂಡು ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಸಾಗಲಿದ್ದು, ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾಧ್ಯಕ್ಷ ನಟರಾಜು ತಿಳಿಸಿ ದ್ದಾರೆ.
ಈ ಪ್ರತಿಭಟನೆಯಲ್ಲಿ ಸರಕಾರಿ ನ್ಯಾಯಬೆಲೆ ಅಂಗಡಿ ಹಾಗೂ ಕೈಗಾಡಿ ಸೀಮೆಎಣ್ಣೆ ವಿತರಕರ ಸಂಘದವರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.