Wednesday, 18th September 2024

ಪಿಎಸ್‌ಐ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಮಂಗಳೂರು : ನಗರದಲ್ಲಿ ಕರ್ತವ್ಯದಲ್ಲಿದ್ದ ಸಿಐಎಸ್‌ಎಫ್ ನ ಪಿಎಸ್‌ಐವೊಬ್ಬರು​ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ನಿವಾಸಿ ಪಿಎಸ್‌ಐ ಜಾಕೀರ್ ಹುಸೇನ್ (58) ಆತ್ಮಹತ್ಯೆ ಮಾಡಿಕೊಂಡವರು. ಜಾಕೀರ್ ಹುಸೇನ್ ಅವರನ್ನು NMPT ಮುಖ್ಯ ಗೇಟ್‌ನಲ್ಲಿ ನೈಟ್ ಶಿಫ್ಟ್‌ಗೆ ನಿಯೋಜಿಸಲಾಗಿತ್ತು. ಪಾಳಿ ಮುಗಿಸಿ ಮುಖ್ಯ ಗೇಟ್‌ನ ಪಕ್ಕದಲ್ಲಿರುವ ವಾಶ್‌ರೂಮ್‌ಗೆ ತೆರಳಿದ್ದಾರೆ. ಈ ವೇಳೆ ವಾಶ್​ ರೂಮ್​ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

ಇದೇ ತಿಂಗಳ ಆರಂಭದಲ್ಲಿ ಛತ್ತೀಸ್​ಗಢದ ಕೊರ್ಬಾ ಜಿಲ್ಲೆಯಲ್ಲಿ ಇವಿಎಂ ಭದ್ರತೆಗಾಗಿ ನಿಯೋಜಿಸಿದ್ದ ಯೋಧನೊಬ್ಬ ತನ್ನದೇ ಐಎನ್​ಎಸ್​ಎಎಸ್​ ರೈಫಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು.

Leave a Reply

Your email address will not be published. Required fields are marked *