Friday, 20th September 2024

ಜೂನ್ 1 ರಿಂದ ಪದವಿ ಪೂರ್ವ ಕಾಲೇಜುಗಳು ಆರಂಭ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳು ಜೂನ್ 1 ರಿಂದ ಆರಂಭವಾಗಲಿದ್ದು, ಪ್ರಥಮ ಪಿಯುಸಿಗೆ ಪ್ರವೇಶ ಪ್ರಕ್ರಿಯೆ ಮೇ 13 ರಿಂದ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಕ್ಟೋಬರ್ 2ರಿಂದ ಅಕ್ಟೋಬರ್ 18 ರವರೆಗೆ ದಸರಾ ರಜೆ ಇರಲಿದ್ದು, ಅಕ್ಟೋಬರ್ 19 ರಿಂದ 2025 ರ ಮಾರ್ಚ್ 31 ರ ವರೆಗೆ ಎರಡನೇ ಅವಧಿಯ ತರಗತಿಗಳು ಆರಂಭವಾಗಲಿವೆ. 2025ರ ಏಪ್ರಿಲ್ 1 ರಿಂದ ಬೇಸಿಗೆ ರಜೆ ಘೋಷಿಸಲಾಗಿದೆ.

ವಿದ್ಯಾರ್ಥಿಗಳು ದಂಡ ಶುಲ್ಕವಿಲ್ಲದೆ ಜೂನ್ 14ರ ಒಳಗೆ ಪ್ರವೇಶ ಪಡೆಯಬಹುದಾಗಿದ್ದು, ಜೂನ್ 29 ರ ಒಳಗೆ ಎಲ್ಲ ಪ್ರವೇಶ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ.

ಪ್ರವೇಶ ಶುಲ್ಕಗಳು ಕಳೆದ ಶೈಕ್ಷಣಿಕ ವರ್ಷದಲ್ಲಿ ಇದ್ದಂತೆ ಮುಂದುವರೆಯಲಿದ್ದು, ಯಾವುದೇ ಬದಲಾವಣೆಯನ್ನು ಮಾಡಲಾಗಿಲ್ಲ. ಅಲ್ಲದೆ ಎಲ್ಲ ಕಾಲೇಜುಗಳು ಮಾರ್ಗಸೂಚಿಯಂತೆ ಮೀಸಲಾತಿ ಅನ್ವಯ ಮೆರಿಟ್ ಆಧಾರದಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು ಎಂದು ತಿಳಿಸಲಾಗಿದೆ.