ಪುತ್ತೂರು/ ಸುಳ್ಯ: ಬಿಜೆಪಿ ಯುವ ಮೋರ್ಚಾದ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಸಂಘಪರಿವಾರದ ಸಂಘಟನೆಗಳು ಪುತ್ತೂರು, ಸುಳ್ಯ ಹಾಗೂ ಕಡಬ ತಾಲ್ಲೂಕು ಬಂದ್ಗೆ ಕರೆ ನೀಡಿದ್ದಾರೆ.
ಸರ್ಕಾರಿ ಬಸ್ ಒಂದಕ್ಕೆ ಪುತ್ತೂರಿನ ಬೊಳುವಾರು ಬಳಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಈ ಮೂರು ತಾಲ್ಲೂಕುಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ.