Thursday, 12th December 2024

ಪುತ್ತೂರು, ಸುಳ್ಯ, ಕಡಬ ತಾಲ್ಲೂಕು ಬಂದ್‌ಗೆ ಕರೆ

ಪುತ್ತೂರು/ ಸುಳ್ಯ: ಬಿಜೆಪಿ ಯುವ ಮೋರ್ಚಾದ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಸಂಘಪರಿವಾರದ ಸಂಘಟನೆಗಳು ಪುತ್ತೂರು, ಸುಳ್ಯ ಹಾಗೂ ಕಡಬ ತಾಲ್ಲೂಕು ಬಂದ್‌ಗೆ ಕರೆ ನೀಡಿದ್ದಾರೆ.

ಸರ್ಕಾರಿ ಬಸ್ ಒಂದಕ್ಕೆ ಪುತ್ತೂರಿನ ಬೊಳುವಾರು ಬಳಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಈ ಮೂರು ತಾಲ್ಲೂಕುಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ.

ಬಸ್ ಸೌಕರ್ಯ ಇಲ್ಲದೇ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಕಚೇರಿಗಳಿಗೆ ತೆರಳುವವರು ಸಮಸ್ಯೆ ಎದುರಿಸಿದರು.

ಪುತ್ತೂರಿನ ವಿವೇಕಾನಂದ‌ ಕಾಲೇಜು ಸೇರಿದಂತೆ ಕೆಲವು ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಿದರು.