Sunday, 15th December 2024

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ

ಮೈಸೂರು: ಮೈಸೂರಿನಲ್ಲಿ ಹೃದಯಾಘಾತದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ (61) ನಿಧನರಾಗಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರಿಗೆ ಹೃದಯಘಾತವಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಯಾಗದೇ ನಿಧನರಾಗಿದ್ದಾರೆ.

ಅವರ ಅಗಲಿಕೆಯಿಂದ ಕಾಂಗ್ರೆಸ್‌ ನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಆರ್. ಧ್ರುವನಾರಾಯಣ ಅಗಲಿಕೆಗೆ ರಾಹುಲ್‌ ಗಾಂಧಿ ಸಂತಾಪ ಸೂಚಿಸಿದ್ದಾರೆ. ಆರ್‌ ಧ್ರುವನಾರಾಯಣ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥನೆ ಮಾಡಿಕೊಳ್ಳುತ್ತೇನೆ. ಅವರ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಟ್ವೀಟ್‌ ಮೂಲಕ ರಾಹುಲ್‌ ಗಾಂಧಿ ಕಂಬನಿ ಮಿಡಿದಿದ್ದಾರೆ.

ಎಂಎಲ್‌ ಸಿ ಗೋವಿಂದರಾಜು, ಹೆಚ್.ಸಿ ಮಹದೇವಪ್ಪ, ಸಂಸದ ಸದಾನಂದ ಗೌಡ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.