Thursday, 12th December 2024

ಬಿಸಿ ಊಟದಲ್ಲಿ ಹಲ್ಲಿ: ಅಸ್ವಸ್ಥಗೊಂಡ 49 ಮಕ್ಕಳು ರಿಮ್ಸ್ ಆಸ್ಪತ್ರೆಗೆ ದಾಖಲು

ಆಸ್ಪತ್ರೆಗೆ ಶಾಸಕರಾದ ಬಸವನಗೌಡ ದದ್ದಲ್ ಅವರು ಸ್ಥಳಕ್ಕೆ ಬೇಟಿ

ರಾಯಚೂರು : ತಾಲೂಕಿನ ಅಪ್ಪನ ದೊಡ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿ ಊಟ ಸೇವನೆಯಿಂದ ಅಸ್ವಸ್ಥಗೊಂಡ ಸುಮರು 49 ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ಸೇರಿಸಿದ ಘಟನೆ ನಡೆದಿದೆ.

ಶಾಲೆಯಲ್ಲಿ ಒಟ್ಟು 123 ವಿದ್ಯಾರ್ಥಿಗಳಿದ್ದು, ಮಧ್ಯಾಹ್ನ ಬಿಸಿ ಊಟದಲ್ಲಿ ಹಲ್ಲಿಯೊಂದು ಬಿದ್ದಿರುವುದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.

ಮಧ್ಯಾಹ್ನ ಬಿಸಿ ಊಟ ಸೇವನೆ ನಂತರ ಕೆಲ ವಿದ್ಯಾರ್ಥಿಗಳಲ್ಲಿ ಅಸ್ವಸ್ಥತೆ ಕಂಡು ಬಂದಿತು. ಬಿಸಿ ಊಟ ಸೇವಿಸಿದ ಕೆಲವರು ವಾಂತಿ ಮಾಡಿಕೊಂಡ ಪ್ರಕರಣದಿಂದ 49 ವಿದ್ಯಾರ್ಥಿಗಳನ್ನು ತಕ್ಷಣವೇ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಳಿದ ವಿದ್ಯಾರ್ಥಿಗಳನ್ನು ಶಾಲೆಯಲ್ಲಿಯೇ ಉಳಿಸಿ ನಿಗಾ ವಹಿಸಲಾಗಿತ್ತು.ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಸುರೇಂದ್ರಬಾಬು ನೇತೃತ್ವದಲ್ಲಿ ತಾಲೂಕ ಆರೋಗ್ಯ ಅಧಿಕಾರಿಗಳ ವೈದ್ಯರ ತಂಡ ತಕ್ಷಣವೇ ಗ್ರಾಮಕ್ಕೆ ಭೇಟಿ ನೀಡಿ ಸ್ಥಿತಿ ಗತಿ ಪ್ರಶೀಲಿಸಲಾಗುತ್ತಿದ್ದು, ಸ್ಥಳಕ್ಕೆ ಧಾವಿಸಿದ ಗ್ರಾಮೀಣ ಶಾಸಕರಾದ ಬಸವನಗೌಡ ದದ್ದಲ್ ಅವರು ಮಕ್ಕಳ ಆರೋಗ್ಯ ಮತ್ತು ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು.

ಬಿಸಿ ಊಟದಿಂದ ಅಸ್ವಸ್ಥಗೊಂಡ ಎಲ್ಲ ವಿದ್ಯಾರ್ಥಿಗಳು ಆರೋಗ್ಯ ಮತ್ತು ಸುರಕ್ಷಿತವಾಗಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ.

ವೈದ್ಯಾಧಿಕಾರಿಗಳು ಸೇರಿದಂತೆ ಶಾಲಾ ಮುಖ್ಯಸ್ಥರೊಂದಿಗೆ ಚರ್ಚಿಸಿದ ಶಾಸಕ ದದ್ದಲ್ ಬಸವನಗೌಡ ಅವರು ಮಕ್ಕಳ ಆರೋಗ್ಯ ವಿಷಯದಲ್ಲಿ ಹೆಚ್ಚಿನ ಕಾಳಜಿ ವಹಿಸುವಂತೆ ಸೂಚಿಸಿದರು.