ದಾವಣಗೆರೆ: ಕನ್ನಡಿಗರು ಇನ್ಮುಂದೆ ಕೇಂದ್ರ ರೈಲ್ವೆ ಇಲಾಖೆಯ ಪರೀಕ್ಷೆಗಳನ್ನು (Railway Exam) ಕನ್ನಡದಲ್ಲೇ ಬರೆಯಬಹುದು ಎಂದು ಕೇಂದ್ರ ರೈಲ್ವೈ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಘೋಷಣೆ ಮಾಡಿದ್ದಾರೆ.
ನಗರದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕನ್ನಡದಲ್ಲೇ ರೈಲ್ವೆ ಪರೀಕ್ಷೆಗಳನ್ನು ಇಲಾಖೆ ನಡೆಸಲಿದೆ. ಈ ಮೂಲಕ 40 ವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದೇವೆ ಎಂದು ತಿಳಿಸಿದ್ದಾರೆ.
ರೈಲ್ವೆ ನೇಮಕಾತಿ ಮಂಡಳಿ (RRB) ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಿ ಸುತ್ತೋಲೆ ಹೊರಡಿಸುವಂತೆ ರೈಲ್ವೆ ನೇಮಕಾತಿ ಬೋರ್ಡ್ ಪ್ರಧಾನ ವ್ಯವಸ್ಥಾಪಕರಿಗೆ ಕಳೆದ ಆಗಸ್ಟ್ನಲ್ಲಿಯೇ ಸಚಿವ ಸೋಮಣ್ಣ ಸೂಚನೆ ನೀಡಿದ್ದರು.
ಈ ಸುದ್ದಿಯನ್ನೂ ಓದಿ | DK Shivakumar: ರಿಫೆಕ್ಸ್ ಗ್ರೂಪ್‌ನ 170 ಎಲೆಕ್ಟ್ರಿಕ್ ಕಾರುಗಳಿಗೆ ಡಿ.ಕೆ. ಶಿವಕುಮಾರ್ ಚಾಲನೆ
ಇನ್ನು ಈ ಹಿಂದೆ ಲೋಕೋ ಪೈಲೆಟ್ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲೂ ನಡೆಸುವಂತೆ ಸಂಸದ ತೇಜಸ್ವಿ ಸೂರ್ಯ ಅವರು ಸಚಿವರಿಗೆ ಮನವಿ ಮಾಡಿದ್ದರು. ಇದೀಗ ರೈಲ್ವೆ ಇಲಾಖೆಯ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಬಹುದು ಸಚಿವರು ಹೇಳಿದ್ದಾರೆ.