Tuesday, 5th November 2024

Railway Exams: ಇನ್ಮುಂದೆ ಕನ್ನಡದಲ್ಲೇ ರೈಲ್ವೆ ಪರೀಕ್ಷೆ: ಸಚಿವ ವಿ.ಸೋಮಣ್ಣ

Railway Exams

ದಾವಣಗೆರೆ: ಕನ್ನಡಿಗರು ಇನ್ಮುಂದೆ ಕೇಂದ್ರ ರೈಲ್ವೆ ಇಲಾಖೆಯ ಪರೀಕ್ಷೆಗಳನ್ನು (Railway Exam) ಕನ್ನಡದಲ್ಲೇ ಬರೆಯಬಹುದು ಎಂದು ಕೇಂದ್ರ ರೈಲ್ವೈ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಘೋಷಣೆ ಮಾಡಿದ್ದಾರೆ.

ನಗರದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕನ್ನಡದಲ್ಲೇ ರೈಲ್ವೆ ಪರೀಕ್ಷೆಗಳನ್ನು ಇಲಾಖೆ ನಡೆಸಲಿದೆ. ಈ ಮೂಲಕ 40 ವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದೇವೆ ಎಂದು ತಿಳಿಸಿದ್ದಾರೆ.

ರೈಲ್ವೆ ನೇಮಕಾತಿ ಮಂಡಳಿ (RRB) ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಿ ಸುತ್ತೋಲೆ ಹೊರಡಿಸುವಂತೆ ರೈಲ್ವೆ ನೇಮಕಾತಿ ಬೋರ್ಡ್‌ ಪ್ರಧಾನ ವ್ಯವಸ್ಥಾಪಕರಿಗೆ ಕಳೆದ ಆಗಸ್ಟ್​​​ನಲ್ಲಿಯೇ ಸಚಿವ ಸೋಮಣ್ಣ ಸೂಚನೆ ನೀಡಿದ್ದರು.

ಈ ಸುದ್ದಿಯನ್ನೂ ಓದಿ | DK Shivakumar: ರಿಫೆಕ್ಸ್ ಗ್ರೂಪ್‌ನ 170 ಎಲೆಕ್ಟ್ರಿಕ್ ಕಾರುಗಳಿಗೆ ಡಿ.ಕೆ. ಶಿವಕುಮಾರ್ ಚಾಲನೆ

ಇನ್ನು ಈ ಹಿಂದೆ ಲೋಕೋ ಪೈಲೆಟ್‌ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲೂ ನಡೆಸುವಂತೆ ಸಂಸದ ತೇಜಸ್ವಿ ಸೂರ್ಯ ಅವರು ಸಚಿವರಿಗೆ ಮನವಿ ಮಾಡಿದ್ದರು. ಇದೀಗ ರೈಲ್ವೆ ಇಲಾಖೆಯ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಬಹುದು ಸಚಿವರು ಹೇಳಿದ್ದಾರೆ.