Friday, 22nd November 2024

Rain Alert: ಜಿಲ್ಲೆಯಲ್ಲಿ ಭಾರಿ ಮಳೆ, ಯಲ್ಲೋ ಅಲರ್ಟ್ ಘೋಷಣೆ 

ತುಮಕೂರು: ಭಾರತೀಯ ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಇನ್ನೆರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಗೂಗಲ್ ಮೀಟ್ ಮೂಲಕ ಮಾತನಾಡಿ ಮಳೆಯಿಂದ ಯಾವುದೇ ಜನ, ಜಾನುವಾರುಗಳಿಗೆ ಜೀವ ಹಾನಿಯಾಗದಂತೆ ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ, ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನದಿದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಫೋಟೋ, ಸೆಲ್ಪಿಗಳನ್ನು ತೆಗೆಯದಂತೆ ಯುವಕ, ಯುವತಿಯರಿಗೆ ಮತ್ತು ಸಾರ್ವಜನಿಕರಿಗೆ ತಿಳಿ ಹೇಳಬೇಕು. ಭಾರಿ ಮಳೆ ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರಬೇಕು ಹಾಗೂ ಧ್ವನಿ ವರ್ಧಕದ ಮೂಲಕ ಜಾಗೃತಿ ಮೂಡಿಸಬೇಕು ಎಂದು ಗ್ರಾಮ ಆಡಳಿತ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿದು ಸಾವು, ನೋವುಗಳು ಸಂಭವಿ ಸುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿರುವಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು. ರಾಜ್ಯ, ಜಿಲ್ಲಾ ಡಳಿತ, ತಾಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳು ನೀಡುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಹೆಚ್ಚು ಪ್ರಚಾರ ಕೈಗೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ನಿರ್ದೇಶಸಿದ್ದಾರೆ. 

ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿ  ಸಂಖ್ಯೆ: ೭೩೦೪೯೭೫೫೧೯ ಅಥವಾ ದೂರವಾಣಿ  ಸಂಖ್ಯೆ : ೦೮೧೬- ೨೨೧೩೪೦೦, ೦೮೧೬-೧೫೫೩೦೪ ಅಥವಾ ವಾಟ್ಸಪ್ ಸಂಖ್ಯೆ: ೭೩೦೪೯೭೫೫೨೯ನ್ನು ಸಂಪರ್ಕಿಸಬೇಕೆಂದು ಸಾರ್ವಜನಿಕರಿಗೆ ಮಾಹಿತಿ ನೀಡಬೇಕೆಂದು ತಿಳಿಸಿದ್ದಾರೆ.

ಇದನ್ನೂ ಓದಿ: Heavy Rain: ಭಾರೀ ಮಳೆಗೆ ಆಂಧ್ರ, ತೆಲಂಗಾಣ ತತ್ತರ; 10 ಬಲಿ- 100ಕ್ಕೂಅಧಿಕ ರೈಲುಗಳು ರದ್ದು