Friday, 22nd November 2024

ನಿರಂತರ ಮಳೆ: ಜು.25, 26 ರಂದು ಶಾಲಾ ಕಾಲೇಜುಗಳಿಗೆ ರಜೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕಳೆದ ಎರಡು ವಾರಗಳಿಂದ ನಿರಂತರ ಮಳೆಯಾಗುತ್ತಿದೆ. ವಾತಾವರಣ ಶೀತಮಯವಾಗಿದ್ದು, ಎಲ್ಲೆಡೆ ಅನಾರೋಗ್ಯದ ಆತಂಕ ಎದುರಾಗಿದೆ. ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಆಗಿದೆ.

ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ಇಂದಿನಿಂದ (ಜುಲೈ 25 ಮತ್ತು 26 ರಂದು) ಎರಡು ದಿನ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ. ಮತ್ತು ತಂಪುಗಾಳಿ ಬಿಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪೂರ್ವ ಪ್ರಾಥಮಿಕ ಶಾಲೆ, ಖಾಸಗಿ, ಅನುದಾನಿತ, ಸರ್ಕಾರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದರು.

ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚಿಸಿದ್ದಾರೆ.