ತುಮಕೂರು: ನಗರದ ರಿಂಗ್ ರಸ್ತೆಯ ಆರ್.ಎಸ್. ಕಲ್ಯಾಣ ಮಂಟಪದಲ್ಲಿ ಮೇ.28 ರಂದು ಸಂಜೆ 5 ರಿಂದ ರಾತ್ರಿ 8 ಗಂಟೆಯ ವರೆಗೆ ಬಿಜೆಪಿ ರೈತ ಮೋರ್ಚಾ ರಾಜ್ಯ ಪದಾಧಿಕಾರಿಗಳ ಸಭೆ ಹಾಗೂ ಮೇ.29 ರಂದು ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಶಿವ ಪ್ರಸಾದ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಬಿಜೆಪಿ ರೈತ ಮೋರ್ಚಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್ ಅವರು ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ ಎಂದರು.
ಮೇ.29 ರಂದು ಬೆಳಿಗ್ಗೆ 10.30 ಗಂಟೆಗೆ ರೈತ ಮೋರ್ಚಾ ರಾಜ್ಯ ಕಾರಿಕಾರಿಣಿ ಸಭೆ ನಡೆಯ ಲಿದ್ದು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಈ ಸಭೆಯನ್ನು ಉದ್ಘಾಟಿಸುವರು ಎಂದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಎರಡೂ ಸಭೆಗಳ ಅಧ್ಯಕ್ಷತೆ ವಹಿಸಲಿದ್ದು, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ರಾಜ್ಯ ರೈತ ಮೋರ್ಚಾ ಪ್ರಭಾರಿ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಸಂಸದ ಜಿ.ಎಸ್. ಬಸವರಾಜು, ತುರು ವೇಕೆರೆ ಶಾಸಕ ಮಸಾಲೆ ಜಯರಾಮ್, ತುಮಕೂರು ಸಂಘಟನಾತ್ಮಕ ಜಿಲ್ಲೆ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ಮಧುಗಿರಿ ಸಂಘನಾತ್ಮಕ ಜಿಲ್ಲೆ ಬಿಜೆಪಿ ಅಧ್ಯಕ್ಷ ಬಿ.ಕೆ. ಮಂಜುನಾಥ್ ಮುಂತಾದವರು ಭಾಗವಹಿಸುವರು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಇತರೆ ಪದಾಧಿಕಾರಿಗಳು ಸೇರಿ 167 ಮಂದಿ ಭಾಗವಹಿಸುವರು ಎಂದರು.
ಮೇ 29 ರಂದು ಸಂಜೆ 3.45 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಸಮಾ ರೋಪ ಭಾಷಣ ಮಾಡುವರು. ಶಿರಾ ಶಾಸಕ ಡಾ.ಸಿ.ಎಂ.ರಾಜೇಶಗೌಡ ಸೇರಿದಂತೆ ಇತರೆ ಗಣ್ಯರು ಭಾಗವಹಿಸುವರು ಎಂದು ತಿಳಿಸಿದರು.
ರಾಜ್ಯ ರೈತ ಮೋರ್ಚಾ ವತಿಯಿಂದ 3 ತಿಂಗಳ ಕಾಲ ಇದೇ ರೀತಿಯ ಸಭೆ ಸಮಾರಂಭಗಳನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿ ಗ್ರಾ.ಪಂ.ಗೆ ಇಬ್ಬರಂತೆ ಸುಮಾರು 20 ಸಾವಿರ ಬಿಜೆಪಿ ರೈತ ಪ್ರತಿನಿಧಿಗಳು ಆಗಮಿಸುವ ನಿರೀಕ್ಷೆ ಇದೆ ಎಂದರು.
ಮುಂಬರುವ ವಿಧಾನಸಭಾ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತಪರ ಯೋಜನೆಗಳು ಮತ್ತು ಆರ್ಥಿಕ ಸಬಲೀಕರಣ ಸಂಬಂಧಿಸಿದಂತೆ ಸುಧೀರ್ಘ ಚರ್ಚೆ ನಡೆಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ಮುಖಂಡರಾದ ಶಿವಶಂಕರಬಾಬು, ವಿಶ್ವನಾಥ್, ಚಂದ್ರಶೇಖರ್, ಕೆ.ಪಿ.ಮಹೇಶ್, ಟಿ.ಆರ್. ಸದಾಶಿವಯ್ಯ, ಜೆ.ಜಗದೀಶ್ ಇದ್ದರು.