Thursday, 12th December 2024

ಜನವಿರೋಧಿ ಬಿಜೆಪಿ ತೊಲಗಿಸಲು ಪ್ರಜಾಧ್ವನಿ: ಮಾಜಿ ಶಾಸಕ ರಾಜಣ್ಣ

ತುಮಕೂರು: ಜನವಿರೋಧಿ ಬಿಜೆಪಿ ತೊಲಗಿಸಿ ಕಾಂಗ್ರೆಸ್ ಆಡಳಿತ ತರುವ ನಿಟ್ಟಿನಲ್ಲಿ ಪ್ರಜಾಧ್ವನಿ ಯಾತ್ರೆಯನ್ನು ಜ.24ರಂದು ಹಮ್ಮಿ ಕೊಂಡಿರುವು ದಾಗಿ ಮಾಜಿ ಶಾಸಕರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ  ಕೆ.ಎನ್.ರಾಜಣ್ಣ ತಿಳಿಸಿದರು.
 ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಹಲವು ಕಡೆ ಈಗಾಗಲೇ ‘ಪ್ರಜಾಧ್ವನಿ’ ಯಾತ್ರೆ ನಡೆದಿದ್ದು, ಜನವರಿ 24ರಂದು ತುಮಕೂರಿನಲ್ಲಿ ನಡೆಯಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸೇರಿದಂತೆ ಅನೇಕ ನಾಯಕರುಗಳು ಭಾಗವಹಿಸಲಿದ್ದಾರೆ ಎಂದರು.
ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್ ಮಾತನಾಡಿ,  ತುಮಕೂರಿನಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದು, ಇತ್ತೀಚೆಗೆ ಚಿ.ನಾ.ಹಳ್ಳಿ ತಾಲ್ಲೂಕಿನಲ್ಲಿ ಮೂವರು ಯುವತಿಯರು ಆತ್ಮಹತ್ಯೆ ಮಾಡಿಕೊಂಡಿದ್ದು ಬಿಜೆಪಿಯ ಭ್ರಷ್ಟ ವ್ಯವಸ್ಥೆಯೇ ಕಾರಣ, ಈ ಸರಕಾರದ ಜನವಿರೋಧಿ ನೀತಿಗಳನ್ನು ಜನರಿಗೆ ತಿಳಿಸುವ ಹಿನ್ನಲೆಯಲ್ಲಿ ಈ ಪ್ರಜಾಧ್ವನಿ ಯಾತ್ರೆಯನ್ನು ಹಮ್ಮಿ ಕೊಂಡಿರುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ, ಮಾಜಿ ಅಧ್ಯಕ್ಷ ಎಸ್. ಷಫಿಅಹಮದ್, ಮಾಜಿ ಶಾಸಕರಾದ ಡಾ. ಎಸ್.ರಫೀಕ್ ಅಹಮದ್, ಆರ್.ನಾರಾಯಣ್, ಮುಖಂಡರಾದ ರೆಡ್ಡಿ ಚಿನ್ನಯಲ್ಲಪ್ಪ, ಹೆಚ್.ವಿ.ವೆಂಕಟೇಶ್, ಫರನಾಬೇಗಂ, ಧನಂಜಯ್, ಇಕ್ಬಾಲ್ ಅಹಮದ್ ಇತರರಿದ್ದರು.