ತುಮಕೂರು: ಯಾವ ಬ್ರಾಹ್ಮಣರು ಒಂದು ರೂಪಾಯಿ ಕೊಟ್ಟು ಹೂವು, ಉದಿನಕಡ್ಡಿ ತರೋದಿಲ್ಲ ಎಂದು ಲೇವಡಿ ಮಾಡಿ ರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಬಹಿರಂಗ ಕ್ಷಮೆಯಾಚಿಸದಿದ್ದರೆ ರಾಜ್ಯಪಾಲರು ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸು ವಂತೆ ಆಗ್ರಹಿಸಿ ರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳ ಅರ್ಚಕರ ಮತ್ತು ಆಗಮಿಕರ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟಿಸಿದ ಅರ್ಚಕರು, ಸಚಿವ ರಾಜಣ್ಣ ದಾವಣ ಗೆರೆಯ ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭ ದಲ್ಲಿ ಬ್ರಾಹ್ಮಣರ ಬಗ್ಗೆ ಅತ್ಯಂತ ಲಘುವಾಗಿ ಮಾತನಾಡಿ ಛೇಡಿಸಿದ್ದು ತತ್‌ಕ್ಷಣ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಬ್ರಾಹ್ಮಣರ ಬಗ್ಗೆ ಹಗುರವಾಗಿ ಮಾತನಾಡಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಬಹಿರಂಗ ಕ್ಷಮೆಕೋರಬೇಕು, ಇಲ್ಲದಿದ್ದಲ್ಲಿ ಅವರನ್ನು ಸಚಿವ ಸ್ಥಾನದಿಂದ ವಜಾ ಗೊಳಿಸುವಂತೆ ರಾಜ್ಯಪಾಲರಿಗೆ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳ ಅರ್ಚಕರ ಮತ್ತು ಆಗಮಿಕರ ಸಂಘದ ವತಿಯಿಂದ ಎಡಿಸಿ ಶಿವಾನಂದ ಬಿ, ಕರಾಳೆ ಮೂಲಕ ಮನವಿ ಸಲ್ಲಿಸಲಾಯಿತು.
ಈ ವೇಳೆ ಅಧ್ಯಕ್ಷ ವೆಂಕಟಾಚಲಯ್ಯ, ಗೌರವಾಧ್ಯಕ್ಷ ಡಾ.ಜಾನಕಿರಾಮ್, ಪ್ರಧಾನ ಕಾರ್ಯದರ್ಶಿ ಡಿ.ಕೆ.ಶ್ರೀನಿವಾಸ್ ಮೂರ್ತಿ, ಕಾರ್ಯಾಧ್ಯಕ್ಷ ಎಂ.ವಿ.ಕೃಷ್ಣಮೂರ್ತಿ, ಸಹ ಕಾರ್ಯದರ್ಶಿ ಕೆ.ಟಿ.ಗೋಪಿನಾಥ್, ಖಜಾಂಚಿ ಆರ್.ರಘು, ಸಂಘಟನಾ ಕಾರ್ಯ ದರ್ಶಿ ಎನ್.ಪ್ರಕಾಶ್, ಟಿ.ಆರ್. ವಸಂತಕುಮಾರ್, ಮೋಹನ್ ಕುಮಾರ್ ಇದ್ದರು.