Thursday, 12th December 2024

ಮೀನುಗಾರ ಮುಖಂಡ ರಾಜು ತಾಂಡೇಲ್ ಹೃದಯಾಘಾತದಿಂದ ನಿಧನ

ಕಾರವಾರ: ಮೀನುಗಾರ ಮುಖಂಡ ರಾಜು ತಾಂಡೇಲ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜು ತಾಂಡೇಲ್ ಜಿಲ್ಲಾ ಮೀನು ಮಾರಾಟಗಾರರ ಫೆಡರೇಷನ್ ಅಧ್ಯಕ್ಷರಾಗಿದ್ದರು. ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಅಂತಿಮ ದರ್ಶನ ಪಡೆದರು.

ಜಿಲ್ಲಾ ಆಸ್ಪತ್ರೆಯಿಂದ ಹೊರಟ ಅಂತಿಮ ಮೆರವಣಿಗೆಯಲ್ಲಿ ಶಾಸಕ ಸತೀಶ್ ಸೈಲ್, ಮಾಜಿ ಸಚಿವ ಆನಂದ ಅಸ್ನೋಟಿಕರ್, ಮೀನುಗಾರ ಮುಖಂಡರು, ನೂರಾರು ಮೀನುಗಾರರು ಭಾಗಿಯಾಗಿದ್ದರು. ಕಾರವಾರ ತಾಲೂಕಿನ‌ ಚಿತ್ತಾಕುಲದ ಆಜಾದ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.