Saturday, 27th July 2024

ರಾಮನಗರ ಕದನ: ಕಣದಲ್ಲಿ 1157 ಹುರಿಯಾಳುಗಳು

ರಾಮನಗರ : ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಸಂಬಂಧ ಮೊದಲ ಹಂತದಲ್ಲಿ ರಾಮನಗರ ತಾಲ್ಲೂಕಿನ 20 ಮತ್ತು ಕನಕಪುರ ತಾಲ್ಲೂಕಿನ 36 ಒಟ್ಟು 56 ಗ್ರಾ.ಪಂ.ಗಳಲ್ಲಿ ಚುನಾವಣೆ ನಡೆಯುತ್ತಿದೆ. ಚುನಾವಣೆಗೆ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.

ಗ್ರಾ.ಪಂ.ಚುನಾವಣೆ ಸಂಬಂಧ ರಾಮನಗರ ತಾಲ್ಲೂಕಿನಲ್ಲಿ 193 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 23 ಸೂಕ್ಷ್ಮ ಹಾಗೂ 17 ಅತಿ ಸೂಕ್ಷ್ಮ ಮತಗಟ್ಟೆಗಳಾಗಿರುತ್ತದೆ.ಕನಕಪುರ ತಾಲ್ಲೂಕಿನಲ್ಲಿ 310 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 35 ಸೂಕ್ಷ್ಮ ಹಾಗೂ 35 ಅತಿ ಸೂಕ್ಷ್ಮ ಮತಗಟ್ಟೆಗಳಾಗಿರುತ್ತದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಡಿ.22 ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದರು.

ಹಾರೋಹಳ್ಳಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ದ್ಯಾವಸಂದ್ರ, ಹಾರೋಹಳ್ಳಿ, ಕೊಳ್ಳಿಗಾನಹಳ್ಳಿ, ಟಿ. ಹೊಸಹಳ್ಳಿ ಹಾಗೂ ಕಗ್ಗಲಹಳ್ಳಿ ಗ್ರಾಮ ಪಂಚಾಯಿತಿಗಳನ್ನು ತಾತ್ಕಾಲಿಕವಾಗಿ ಚುನಾವಣೆ ಪ್ರಕ್ರಿಯೆ ಯಿಂದ ಕೈಬಿಡಲಾಗಿದೆ ಎಂದರು.

ಚುನಾವಣೆಗೆ ಸಂಬಂಧಿಸಿದಂತೆ ಮಸ್ಟರಿಂಗ್, ಡಿ-ಮಸ್ಟರಿಂಗ್ ಹಾಗೂ ಮತ ಎಣಿಕೆ ಕೆಲಸಗಳು ರಾಮನಗರ ತಾಲ್ಲೂಕಿಗೆ ಸಂಬಂಧಿ ಸಿದಂತೆ ರಾಮನಗರ ಟೌನ್‌ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಗೂ ಕನಕಪುರ ತಾಲ್ಲೂಕಿಗೆ ಸಂಬಂಧಿಸಿದಂತೆ ಕನಕಪುರ ಟೌನ್‌ನಲ್ಲಿರುವ ರೂರಲ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದರು.

ರಾಮನಗರ ತಾಲ್ಲೂಕಿಗೆ ಸಂಬಂಧಿಸಿದಂತೆ 893 ಮತಗಟ್ಟೆ ಸಿಬ್ಬಂದಿ ಹಾಗೂ ಕನಕಪುರ ತಾಲ್ಲೂಕಿಗೆ ಸಂಬಂಧಿಸಿದಂತೆ 1588 ಮತಗಟ್ಟೆ ಸಿಬ್ಬಂದಿಗಳು ಸೇರಿದಂತೆ ಒಟ್ಟಾರೆ 2481 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದರು. ರಾಮನಗರ ತಾಲ್ಲೂಕಿಗೆ ಸಂಬಂಧಿಸಿದಂತೆ 20 ಗ್ರಾಮ ಪಂಚಾಯಿತಿಗಳ ಒಟ್ಟು 359 ಸ್ಥಾನಗಳಲ್ಲಿ 2 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗದೇ ಖಾಲಿ ಉಳಿದಿರುತ್ತದೆ. 26 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. 331 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 830 ಅಭ್ಯರ್ಥಿಗಳು ಅಂತಿಮ ಕಣದಲ್ಲಿರುತ್ತಾರೆ.

ಕನಕಪುರ ತಾಲ್ಲೂಕಿಗೆ ಸಂಬಂಧಿಸಿದಂತೆ 36 ಗ್ರಾಮ ಪಂಚಾಯಿತಿಗಳ ಒಟ್ಟು 612ಸ್ಥಾನಗಳಲ್ಲಿ 1 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಯಾಗದೇ ಖಾಲಿ ಉಳಿದಿರುತ್ತದೆ. 121 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. 490 ಸ್ಥಾನಗಳಿಗೆ ಚುನಾವಣೆ ನಡೆಯ ಲಿದ್ದು, 1157 ಅಭ್ಯರ್ಥಿಗಳು ಅಂತಿಮ ಕಣದಲ್ಲಿರುತ್ತಾರೆ.

ಮೊದಲ ಹಂತದಲ್ಲಿ ಒಟ್ಟಾರೆ 56 ಗ್ರಾಮ ಪಂಚಾಯಿತಿಗಳ ಒಟ್ಟು 971 ಸ್ಥಾನಗಳಲ್ಲಿ 3 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗದೇ ಖಾಲಿ ಉಳಿದಿರುತ್ತದೆ. 147 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. 821 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 1987 ಅಭ್ಯರ್ಥಿಗಳು ಅಂತಿಮ ಕಣದಲ್ಲಿರುತ್ತಾರೆ.

ಸೋಂಕಿತರಿಗೂ ಮತದಾನ: ಕೋವಿಡ್-19 ಹಿನ್ನಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ಎಸ್.ಒ.ಪಿ ನೀಡಿದೆ. ಎಸ್.ಒ.ಪಿ ಯಂತೆ ಕೋವಿಡ್-19 ಸೋಂಕಿತರು ಮತಗಟ್ಟೆಗಳಿಗೆ ತೆರಳಿ ಖುದ್ದು ಮತದಾನ ಮಾಡಲು ಇಚ್ಚಿಸಿದಲ್ಲಿ ಇವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಮುನ್ನೆಚ್ಚರಿಕಾ ಕ್ರಮ: ಆರೋಗ್ಯ ಇಲಾಖಾ ಸಿಬ್ಬಂದಿಗಳು ಕೋವಿಡ್ ಸೋಂಕಿತರು ಹಾಗೂ ಕೋವಿಡ್ ಶಂಕಿತರನ್ನು ಅಗತ್ಯ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸಂಬಂಧಪಟ್ಟ ಮತಗಟ್ಟೆಗಳಿಗೆ ಮತದಾನದ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಕರೆತಂದು ಮತದಾನದ ನಂತರ ಅವರನ್ನು ಸ್ವಸ್ಥಾನಕ್ಕೆ ಮರಳಿ ಕರೆದುಕೊಂಡು ಹೋಗುವರು.

ಆರೋಗ್ಯ ಸಿಬ್ಬಂದಿ ನೇಮಕ: ಮತದಾನ ಕೇಂದ್ರಕ್ಕೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು. ಮತದಾನ ಕೊಠಡಿಗೆ ಆಗಮಿಸುವ ವ್ಯಕ್ತಿಗಳನ್ನು ಪ್ರವೇಶದ್ವಾರದಲ್ಲಿ ಕೋವಿಡ್-19 ಥರ್ಮಲ್ ಜ್ವರ ತಪಾಸಣೆ ಮಾಡಲಾಗು ವುದು ಹಾಗೂ ಒಳಪ್ರವೇಶಿಸುವ ವ್ಯಕ್ತಿಗಳು ಮಾಸ್ಕ್ ಧರಿಸಿರುವುದನ್ನು ಹಾಗೂ ಪ್ರತಿಯೊಬ್ಬರೂ ಸ್ಯಾನಿಟೈಸರ್ ಬಳಸಿ ಕೈ ಶುಚಿ ಗೊಳಿಸಿಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!