Friday, 13th December 2024

ರ‍್ಯಾಂಕ್‌ ಗಳಿಸಿದ ಆರ್.ಮಹೇಶ್, ಆರ್.ಯೋಗೀಶ್ವರ್

ತುಮಕೂರು: ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಸಿದ್ದಗಂಗಾ ಪಾಲಿಟೆಕ್ನಿಕ್ ಕಾಲೇಜಿನ ಡಿಪ್ಲೊಮೊ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಆರ್.ಮಹೇಶ್ (ಶೇ.97.4) ಹಾಗೂ ಮೆಕ್ಯಾನಿಕಲ್ ಇಂಜಿನಿ ಯರಿಂಗ್ ವಿಭಾಗದ ಆರ್. ಯೋಗೀಶ್ವರ್ (ಶೇ.97.3) ದ್ವಿತೀಯ ರ‍್ಯಾಂಕ್‌ ಗಳಿಸಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ನಡೆದ ನಾಲ್ವಡಿ ಕೃಷ್ಣರಾಜ ಒಡೆಯರ್ ಘಟಿಕೋತ್ಸವ ಸಮಾರಂಭದಲ್ಲಿ ರ‍್ಯಾಂಕ್‌ ಗಳಿಸಿದ ಮಹೇಶ್ ಹಾಗೂ ಯೋಗೀಶ್ವರ್‌ಗೆ ಉನ್ನತ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಎನ್.ರವಿ ಚಂದ್ರನ್ ಬೆಳ್ಳಿ ಪದಕ ಪ್ರದಾನ ಮಾಡಿದರು. ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮತ್ತಿತರರು ಉಪಸ್ಥಿತರಿದ್ದರು.

ಸಾಧಕ ವಿದ್ಯಾರ್ಥಿಗಳಿಬ್ಬರನ್ನು ಸಿದ್ದಗಂಗಾ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಪಿ.ಶಿವಾನಂದ್ ಅಭಿನಂದಿಸಿದ್ದಾರೆ.