Wednesday, 24th April 2024

ಸಾಮೂಹಿಕ ಅತ್ಯಾಚಾರ: 17 ಜನರ ವಿರುದ್ಧ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಶೃಂಗೇರಿಯಲ್ಲಿ ನಡೆದಿದೆ. 17 ಜನರು ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ.

ಅತ್ಯಾಚಾರಕ್ಕೆ ಬಾಲಕಿ ಚಿಕ್ಕಮ್ಮ ಗೀತಾ ಸಹ ಸಹಕಾರ ನೀಡಿದ್ದಾರೆ ಎಂಬ ಆರೋಪವಿದ್ದು, ಅವರ ನಿರುದ್ದವೂ ಎಫ್‌ಐಆರ್ ದಾಖಲಾಗಿದೆ. ಮಕ್ಕಳ ಕಲ್ಯಾಣ ಸಮಿತಿಯ ಸುಬ್ರಮಣ್ಯ ಎಂಬವರು ಈ ಕುರಿತು ದೂರು ನೀಡಿದ್ದರು. ಘಟನೆ ಬಗ್ಗೆ ಪೊಲೀಸರು ಅಧಿಕೃತ ಹೇಳಿಕೆ ನೀಡಿಲ್ಲ.

ಹಾವೇರಿ ಜಿಲ್ಲೆಯ ಶಿಗ್ಗಾವಿ ಮೂಲದ ಬಾಲಕಿ ತಾಯಿ ನಿಧನದ ಬಳಿಕ ಚಿಕ್ಕಮ್ಮ ಗೀತಾ ಅವರ ಜೊತೆ ಇದ್ದರು.  ಬಾಲಕಿ ಮನೆ ಯಲ್ಲಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದು, ಅದನ್ನು ವಿಡಿಯೋ ಮಾಡಿಕೊಂಡಿದ್ದ. ಬಳಿಕ ವಿಡಿಯೋ ತೋರಿಸಿ ಆಕೆಗೆ ಬ್ಲಾಕ್ ಮೇಲ್ ಮಾಡಿದ್ದು, ಸ್ನೇಹಿತರೂ ಸಹ ಆಕೆಯ ಮೇಲೆ ಅತ್ಯಾಚಾರ ನಡೆಸಲು ವ್ಯಕ್ತಿ ಪ್ರೇರೆಪಣೆ ನೀಡಿದ್ದ.

ಪ್ರಕರಣದಲ್ಲಿ ಹಲವು ರೀತಿಯ ಗೊಂದಲಗಳಿದ್ದು, ತನಿಖೆ ಬಳಿಕ ಎಲ್ಲವೂ ತಿಳಿಯಲಿದೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ. ಬಾಲಕಿಯನ್ನು ಚಿಕ್ಕಮಗಳೂರಿನ ಸ್ವಾಧಾರ ಕೇಂದ್ರಕ್ಕೆ ಕಳುಹಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!