Saturday, 27th July 2024

ಈಶ್ವರಪ್ಪ ವಿರುದ್ಧ ಸೆಕ್ಷನ್ 302ರ ಅಡಿ ಕೇಸ್ ದಾಖಲಿಸಿ: ಸಿದ್ದರಾಮಯ್ಯ

ಬೆಂಗಳೂರು: ಈಶ್ವರಪ್ಪನವರು ಕೊಲೆ ಆರೋಪ ಎದುರಿಸುತ್ತಿರುವುದರಿಂದ ಸಚಿವ ಸಂಪುಟದಲ್ಲಿರಲು ಅವಕಾಶ ನೀಡಬಾರದು ಎಂದು ಸಿದ್ದರಾ ಮಯ್ಯ ಮಾತನಾಡಿದರು.

ಈ ಕುರಿತು ಕಾಂಗ್ರೆಸ್ ತನ್ನ ಸಾಮಾಜಿಕ ಜಾಲತಾಣ ಕೂ ನಲ್ಲಿ ವಿಡಿಯೋವನ್ನು ಹಂಚಿಕೊಂಡಿದೆ. ‘ಇದು ದೊಡ್ಡ ಅಪರಾಧ, ಇದಕ್ಕೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ಶಿಕ್ಷೆಯನ್ನೂ ನೀಡಬಹುದಾಗಿದೆ. ಸತ್ತಿರುವ ವ್ಯಕ್ತಿಯೇ ತನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ನೇರ ಆರೋಪ ಮಾಡಿದ್ದು ಇದಕ್ಕಿಂತ ದೊಡ್ಡ ಸಾಕ್ಷಿ ಮತ್ತೇನು ಬೇಕು?’ ಎಂದಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ತನ್ನ ಸಾವಿಗೆ ಯಾರು ಕಾರಣ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ತನ್ನ ಆತ್ಮಹತ್ಯೆಗೆ ಸಚಿವ ಈಶ್ವರಪ್ಪ ಅವರೇ ಕಾರಣ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಶ್ವರಪ್ಪ ಅವರ ವಿರುದ್ಧ ಸೆಕ್ಷನ್ 302ರ ಅಡಿ ಕೇಸ್ ದಾಖಲಿಸಿ ಅವರನ್ನು ಬಂಧಿಸಬೇಕು. ಸಚಿವ ಸಂಪುಟ ದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ತನ್ನ ಸಾವಿಗೆ ಕಾರಣ ಯಾರು ಎಂಬುದನ್ನು ಡೆತ್ ನೋಟ್‌ನಲ್ಲೇ ತಿಳಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವ  ಕುಮಾರ್ ಹೇಳಿದ್ದಾರೆ. ಕೂಡಲೇ ಆರೋಪ ಹೊತ್ತಿರುವ ಸಚಿವ ಕೆ.ಎಸ್ ಈಶ್ವರಪ್ಪ ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಬಂಧಿಸಬೇಕು. ಇದು ಕೇವಲ ಆತ್ಮಹತ್ಯೆ ಪ್ರಕರಣವಲ್ಲ, ಕೊಲೆ ಪ್ರಕರಣ. ಈ ಸಾವಿಗೆ ಕಾರಣ ಏನು ಎಂಬುದು ರಾಜ್ಯಕ್ಕೇ ತಿಳಿದಿದೆ.

error: Content is protected !!