Thursday, 12th December 2024

Retired Principal died: ನಿವೃತ್ತ ಪ್ರಾಂಶುಪಾಲ ಶ್ರೀನಿವಾಸಯ್ಯ ನಿಧನ

tumkur
ತುಮಕೂರು : ನಿವೃತ್ತ ಪ್ರಾಂಶುಪಾಲ ಪ್ರೊ.ಜಿ.ಎಂ.ಶ್ರೀನಿವಾಸಯ್ಯ(91)  ಸೆ.2ರಂದು ರಾತ್ರಿ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ತೀವ್ರ ಅಸ್ವಸ್ಥರಾದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ರಾತ್ರಿ ನಿಧನರಾದರು.
ಹಾಸನ, ಕೋಲಾರ ಮತ್ತು ತುಮಕೂರು  ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು. ವಿದ್ಯಾರ್ಥಿ ವಲಯದಲ್ಲಿ ಅವರು ಜಿಎಂಎಸ್ ಎಂದೇ ಹೆಸರಾಗಿದ್ದರು.ತುಮಕೂರು ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯರಾಗಿದ್ದರು. ಸೆ.3ರಂದು ಮಧ್ಯಾಹ್ನ 2ಕ್ಕೆ ಗಾರ್ಡನ್ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಯಿತು.
ಸಾಹಿತಿಗಳಾದ ಬರಗೂರು ರಾಮಚಂದ್ರ, ಎಸ್.ಜಿ.ಸಿದ್ದರಾಮಯ್ಯ,  ಕೆ.ದೊರೈರಾಜ್, ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರು ಶ್ರೀನಿವಾಸಯ್ಯ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.