ರಾಮನಗರ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಾದ ಸಿ.ಸಿ. ಪಾಟೀಲ್ ಅವರು ಬಿಡದಿಯ ಹುರಗಾನಹಳ್ಳಿ ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಿಶೀಲನೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಗೆ ಮಾತನಾಡಿ ಜಿಲ್ಲೆ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗಣಿಗಾರಿಕೆ ಹಾಗೂ ಕ್ರಷರ್ ಗಳ ಬಗ್ಗೆ ಸಭೆ ನಡೆಸಿ ಪರಿಶೀಲನೆ ನಡೆಸಲಾಗುವುದು. ಅಕ್ರಮ ಗಣಿಗಾರಿಕೆ ಕಂಡುಬಂದಲ್ಲಿ ನಿಯಮಾನುಸಾರ ದಂಡ ವಿಧಿಸಲಾಗುವುದು ಎಂದರು.
ಗಣಿಗಾರಿಕೆ ಸುತ್ತಮುತ್ತಲಿನ ಗ್ರಾಮಗಳು ಹಾಗೂ ರಸ್ತೆಯನ್ನು ಡಿ.ಎಂ.ಎ ಫಂಡ್ ಮೂಲಕ ಅಭಿವೃದ್ಧಿಗೊಳಿಸಲಾಗುವುದು. ಜಿಲ್ಲೆಯ ಗಣಿಗಾರಿಕೆ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೆ ಕ್ರಮ ಕೂಗೊಳ್ಳಲಾಗುವುದು ಎಂದರು.
ಗಣಿಗಾರಿಕೆ ವಸ್ತುಗಳ ಓವರ್ ಲೋಡಿಂಗ್ ಪರಿಶೀಲಿಸಲು ಚೆಕ್ ಪೋಸ್ಟ್ ಗಳನ್ನು ಬಲವರ್ಧನೆಗೊಳಿಸಲಾಗುವುದು. ಹೆಗ್ಗಡಳ್ಳಿ ಬಳಿ ಇರುವ ಚೆಕ್ ಪೋಸ್ಟ್ ಇನ್ನೂ ಮುಂದೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ ಎಂದರು.