Thursday, 19th September 2024

ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿರ್ದೇಶಕ ರಿಷಬ್ ಶೆಟ್ಟಿ ಕುಟುಂಬ

ಮಂಗಳೂರು: ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪತ್ನಿ ಪ್ರಗತಿ ಶೆಟ್ಟಿ ಜೊತೆ ಧರ್ಮಸ್ಥಳಕ್ಕೆ ಆಗಮಿಸಿದ ರಿಷಬ್ ಶೆಟ್ಟಿ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ರಿಷಬ್ ಶೆಟ್ಟಿ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಜೊತೆಗೆ ನಟ ಪ್ರಮೋದ್ ಶೆಟ್ಟಿ ಕೂಡ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

ಮಂಜುನಾಥ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಬಳಿಕ ರಿಷಬ್ ಶೆಟ್ಟಿ ದಂಪತಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿದ್ದಾರೆ. ಈ ಮೊದಲೇ ಕಾಂತಾರ ಸಿನಿಮಾ ವೀಕ್ಷಿಸಿದ್ದ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಕಾಂತಾರ ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವೇಳೆ ವೀರೇಂದ್ರ ಹೆಗ್ಗಡೆ ಅವರ ಧರ್ಮಪತ್ನಿ ಹೇಮಾವತಿ ಹೆಗ್ಗಡೆ ಸಹ ಉಪಸ್ಥಿತ ರಿದ್ದರು.
ಕಾಂತಾರ ಸಿನಿಮಾ ಬಗ್ಗೆ ಸಿನಿಮಾದ ಕಥಾವಸ್ತು ಬಗ್ಗೆ ರಿಷಬ್ ಶೆಟ್ಟಿ ಹಾಗೂ ಧರ್ಮಾಧಿ ಕಾರಿಗಳಾದ ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಹೆಗ್ಗಡೆ ಅವರು ಕೆಲಕಾಲ ಚರ್ಚೆ ನಡೆಸಿದರು. ರಿಷಬ್ ಶೆಟ್ಟಿ ದಂಪತಿ ಧರ್ಮಸ್ಥಳ ಧರ್ಮಾಧಿಕಾರಿಗಳ ಆಶೀರ್ವಾದ ಪಡೆದಿದ್ದಾರೆ.ಕಾಂತಾರ ಸಿನಿಮಾ ಮಾಡುವ ಮುನ್ನ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿದ್ದೆ. ಆ ಬಳಿಕ ಟ್ರೇಲರ್ ರಿಲೀಸ್ ಆದ ಬಳಿಕ ಮತ್ತೆ ಬಂದು ದೇವರ ದರ್ಶನ ಪಡೆದಿದ್ದೆ. ಸಿನಿಮಾ ಬಿಡುಗಡೆಯಾದ ಬಳಿಕ ವೀರೇಂದ್ರ ಹೆಗ್ಗಡೆಯವರ ಭೇಟಿಗೆ ಸಾಕಷ್ಟು ಸಲ ಬರಬೇಕು ಎಂದುಕೊಂಡಿದ್ದೆ. ಆದರೆ ಆಗಲಿಲ್ಲ. ಆದರೆ ಇದೀಗ ಕಾಲ ಕೂಡಿ ಬಂದಿದೆ. ಧರ್ಮಸ್ಥಳಕ್ಕೆ ಬಂದು ಆಶೀರ್ವಾದ ಪಡೆದಿದ್ದೇವೆ. ಸಿನಿಮಾ 30 ದಿನ ದಾಟಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ ಎಂದು ರಿಷಬ್ ಶೆಟ್ಟಿ ಖುಷಿ ಹಂಚಿಕೊಂಡರು.