Saturday, 27th July 2024

ಚಾಮುಂಡಿ ಬೆಟ್ಟದ ದಾರಿಯಲ್ಲಿ ಗುಡ್ಡ ಕುಸಿತ: ಸಂಚಾರಕ್ಕೆ ನಿರ್ಬಂಧ

ಮೈಸೂರು: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಹಾಕಲಾಗಿರುವ ‘ಸುಸ್ವಾಗತ’ ವಿದ್ಯುತ್ ಬೋರ್ಡ್ ಸಮೀಪ ಈ ಭೂಕುಸಿತ ಸಂಭವಿಸಿದೆ. ಸುಮಾರು 60 ಅಡಿಗಳಷ್ಟು ಗುಡ್ಡ ಕುಸಿದಿದೆ. ಗುಡ್ಡ ಕುಸಿತ ದಿಂದ ಪ್ರವಾಸಿಗರ ಸಂಚಾರಕ್ಕೆ ಮೈಸೂರು ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಸತತ 10 ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಬುಧವಾರ ರಾತ್ರಿ ಮೈಸೂರಿನ ಚಾಮುಂಡಿ ಬೆಟ್ಟದ ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ.

ಭಾರೀ ಮಳೆಯಿಂದಾಗಿ ನಂದಿ ದೇವಸ್ಥಾನ ಬಳಿಯ ರಸ್ತೆಯ ತಡೆಗೋಡೆ ಹಾಗೂ ರಸ್ತೆಯ ಕೆಲ ಭಾಗವೂ ಕುಸಿ ದಿದೆ. ಭೂ ಕುಸಿತದ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು, ಆ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸ ದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮೈಸೂರಿನಲ್ಲಿ ಬುಧವಾರ ಧಾರಾಕಾರ ಮಳೆ ಸುರಿದಿದ್ದು, ಕಳೆದ 10 ದಿನಗಳಿಗೆ ಹೋಲಿಸಿದರೆ ನಿನ್ನೆ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಹೀಗಾಗಿ ದೊಡ್ಡ ಮಟ್ಟದಲ್ಲಿ ಗುಡ್ಡ ಕುಸಿತವಾಗಿದೆ.

ಸಹಜವಾಗಿ ಮೈಸೂರಿನ ಜನತೆ ಅದರಲ್ಲೂ ಚಾಮುಂಡಿ ಬೆಟ್ಟಕ್ಕೆ ಹೊಂದಿಕೊಂಡಂತಿರುವ ಮನೆಗಳಲ್ಲಿ ವಾಸವಾಗಿರುವ ಜನರಲ್ಲಿ ಆತಂಕ ಮೂಡಿಸಿದೆ.

Leave a Reply

Your email address will not be published. Required fields are marked *

error: Content is protected !!