ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಸಂಘರ್ಷಕ್ಕೆ ಬ್ರೇಕ್ ಬಿದ್ದಿದೆ. ಸುತ್ತೂರು ಶ್ರೀಗಳ ಸಮ್ಮುಖದಲ್ಲಿ ನಡೆದ ಸಂಧಾನ ಸಫಲವಾಗಿದೆ.
ಕರೋನಾದಂತಹ ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜನರು ಸಂಕಷ್ಟ ಎದುರಿಸುತ್ತಿರುವಾಗ ಜಟಾಪಟಿ ಬೇಡ. ರಾಜೀನಾಮೆ ನಿರ್ಧಾರ ವಾಪಸ್ ಪಡೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸುತ್ತೂರು ಶ್ರೀಗಳ ಸಮ್ಮುಖದಲ್ಲಿ ಸಂಧಾನ ಮಾತುಕತೆ ನಡೆಸಿದ್ದರು. ಏನೇ ಸಮಸ್ಯೆಗಳಿದ್ದರೂ ಅದನ್ನು ಮುಂದುವರೆಸುವುದು ಬೇಡ ಎಂದು ಮನವೊಲಿಕೆ ಮಾಡಿದ್ದಾರೆನ್ನಲಾಗಿದೆ. ಈ ನಿಟ್ಟಿನಲ್ಲಿ ಆಯುಕ್ತೆ ಶಿಲ್ಪಾ ನಾಗ್ ಕೂಡ ಒಪ್ಪಿದ್ದಾರೆ ಎನ್ನಲಾಗಿದೆ.
ಇನ್ನು ಶಿಲ್ಪಾನಾಗ್ ನೀಡಿರುವ ರಾಜೀನಾಮೆಯನ್ನು ಮುಖ್ಯಕಾರ್ಯದರ್ಶಿ ರವಿಕುಮಾರ್ ಕೂಡ ಸ್ವೀಕರಿಸಿಲ್ಲ. ಈ ಹಿನ್ನೆಲೆಯಲ್ಲಿ ಸಧ್ಯ ಶಿಲ್ಪಾ ನಾಗ್ ಇಂದು ಮತ್ತು ನಾಳೆ ಅಧಿಕೃತ ರಜೆಯಲ್ಲಿದ್ದು, ಸೋಮವಾರ ರಾಜೀನಾಮೆ ಹಿಂಪಡೆಯುವ ಬಗ್ಗೆ ನಿರ್ಧರಿಸ ಲಿದ್ದಾರೆ ಎಂದು ತಿಳಿದುಬಂದಿದೆ.