ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ಮಂಜುನಾಥ್ ಅಲಿಯಾಸ್ ಮೆಂಟಲ್ ಮಂಜನನ್ನ ಭೀಕರವಾಗಿ ಕೊಲೆ ಮಾಡಲಾಗಿದೆ.
ಆನೇಕಲ್ ನ ವಿವರ್ಸ್ ಕಾಲೋನಿಯಲ್ಲಿ ಈ ಘಟನೆ ಸಂಭವಿಸಿದೆ.ಶಶಿಕುಮಾರ್ ಹಾಗೂ ವಿಜಯಕುಮಾರ್ ಅಲಿಯಾಸ್ ವಿಜಿ ಕೊಲೆ ಮಾಡಿರುವ ಆರೋಪಿಗಳು ಎಂದು ಹೇಳಲಾಗುತ್ತಿದೆ.
ರೌಡಿ ಮಂಜುನಾಥ್ ಮೇಲೆ ವಿಜಿ ಮತ್ತು ಶಶಿ ಅಟ್ಯಾಕ್ ಮಾಡಿದ್ದಾರೆ. ಚಾಕುವಿನಿಂದ ಚುಚ್ಚಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಗಾಯಗೊಂಡ ಮಂಜನನ್ನು ಕೂಡಲೇ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರೌಡಿಶೀಟರನ್ನು ರವಾನೆ ಮಾಡಲಾಗಿತ್ತು. ಇದೀಗ ಪೊಲೀಸರಿಂದ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ.
ನೆಲಮಂಗಲದ ಅರ್ಕಾವತಿ ನದಿಯಲ್ಲಿ ತೇಲಿ ಬಂದ ಮಹಿಳೆಯ ಶವ ಪತ್ತೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ 35 ವರ್ಷದ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಕೊಲೆ ಮಾಡಿ ಅರ್ಕಾವತಿ ನದಿ ನೀರಿನಲ್ಲಿ ಬಿಸಾಡಿರುವ ಶಂಕೆ ವ್ಯಕ್ತವಾಗುತ್ತಿದೆ.
ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಘಟನೆ ಕುರಿತಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.