ಕೊಲ್ಹಾರ: ಗ್ರಾಮದಲ್ಲಿ ಇರುವ ಗ್ರಾಮ ಪಂಚಾಯತ್ ಗಳು ಮಕ್ಕಳ ಸ್ನೇಹಿ ಗ್ರಾಮ ಪಂಚಾತ್ ಗಳಾಗಬೇಕು. ಇದು ಮಕ್ಕಳ ಕಲಿಕೆಗೆ ಸಹಕಾರಿಯಾಗುತ್ತದೆ ತಾ.ಪಂ ಎಎಓ ಆರ್.ಎಸ್ ಪಾಟೀಲ್ ಹೇಳಿದರು.
ಪಟ್ಟಣದ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ವಿಜಯಪುರ, ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಅಜೀಮ್ ಪ್ರೇಮ್ ಜೀ ಫೌಂಡೇಶನ್ ವಿಜಯಪುರ ಇವರ ಸಂಯೋಗದಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ಅಭಿಯಾ ನದ ಅಂಗವಾಗಿ ಕೊಲ್ಹಾರ ತಾಲ್ಲೂಕ ವ್ಯಾಪ್ತಿಯ ಗ್ರಾಮ ಪಂಚಾಯತ್ ಮಟ್ಟದ ಗ್ರಂಥಾಲಯ ಮೇಲ್ವಿಚಾರಕರಿಗೆ ಹಾಗೂ ಪ್ರತಿ ಗ್ರಾಮ ಪಂಚಾಯತ್ ಮಟ್ಟದ ಒಬ್ಬ ಶಿಕ್ಷಕರಿಗೆ “ಗಟ್ಟಿ ಓದುವಿಕೆ” ಅಭ್ಯಾಸದ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ದಲ್ಲಿ ಮಾತನಾಡಿದ ಅವರು ಮಕ್ಕಳ ಬುದ್ದಿಮತ್ಯೆ ಒರೆಗೆ ಹಚ್ಚಲು ಗಟ್ಟಿ ಓದುವಿಕೆ ಅತಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ಅಜೀಂ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ಗ್ರಾಮ ಮಟ್ಟದ ಒಬ್ಬ ಶಿಕ್ಷಕರಿಗೆ ಹಾಗೂ ಗ್ರಂಥಾಲಯ ಮೇಲ್ವಿಚಾರಕರಿಗೆ ಈ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಅಜಿಂ ಪ್ರೇಮ್ ಜೀ ಫೌಂಡೇಶನ್ ಸಂಪನ್ಮೂಲ ವ್ಯಕ್ತಿ ಟಿ.ಆರ್ ಜಂಬಗಿ ಮಾತನಾಡುತ್ತಾ ಕಳೆದ ವರ್ಷ ಶಿಕ್ಷಣ ಇಲಾಖೆಯ ನೇತೃತ್ವದಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಶನ್ ವತಿ ಯಿಂದ ಗ್ರಾಮ ಮಟ್ಟದಲ್ಲಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಪೂರವಾಗಲು ಆಯಾ ಗ್ರಾಮ ಪಂಚಾಯತ್ ಗಳಿಗೆ ಪುಸ್ತಕಗಳನ್ನು ವಿತರಿಸಲಾಗಿದ್ದು ಅದರ ಮುಂದುವರೆದ ಭಾಗವಾಗಿ ಈ ತರಬೇತಿ ಕಾರ್ಯಾ ಗಾರ ಹಮ್ಮಿಕೊಳ್ಳಲಾಗಿದೆ.
ಇದು ಪ್ರಾಥಮಿಕ ಶಾಲಾ ಮಕ್ಕಳ ಕಲಿಕೆಗೆ ಪೂರಕವಾಗಲಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಬಿ.ಆರ್.ಸಿ ಜಿ.ಆಯ್ ಗೋಡ್ಯಾಳ, ಕೆಂಪರಾಜು ಎಸ್ ಇತರರು ಇದ್ದರು.