Wednesday, 11th December 2024

ಸುಳ್ಯ ಹಾಲಿ ಶಾಸಕ, ಸಚಿವ ಎಸ್.ಅಂಗಾರ ರಾಜಕಾರಣದಿಂದ ನಿವೃತ್ತಿ

ಮಂಗಳೂರು : ಕರ್ನಾಟಕ ವಿಧಾನ ಸಭೆ ಚುನಾವಣೆ ರಣತಂತ್ರ ರೂಪಿಸುತ್ತಿದ್ದ ಬೆನ್ನಲ್ಲೆ ರಾಜ್ಯ ರಾಜಕೀಯದಲ್ಲಿ ನಿವೃತ್ತಿ ಪರ್ವ ಶುರುವಾಗಿದ್ದು, ಸುಳ್ಯ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕ, ಸಚಿವ ಎಸ್.ಅಂಗಾರ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ ಎಂದು ವರದಿಯಾಗಿದೆ

ಖಾಸಗಿ ಮಾದ್ಯವೊಂದರಲ್ಲಿ ವಿಶೇಷ ಸಂದರ್ಶನದಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕ, ಸಚಿವ ಎಸ್. ಅಂಗಾರ ಮಾತನಾಡಿ, ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳು ವಾಗಿದೆ.

ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದ ಅಂಗಾರರು, ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳ ಬಹುದು ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.