Sunday, 15th December 2024

ಕಾಂಗ್ರೆಸ್‌ ಅಭ್ಯರ್ಥಿ ಸಾಗರ್ ಖಂಡ್ರೆಗೆ ಗೆಲುವು

ಬೀದರ್: ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಾಗರ್ ಖಂಡ್ರೆ ಗೆಲುವು ಕಂಡಿದ್ದು, ಈ ಮೂಲಕ ಲೋಕಸಭೆಗೆ ಆಯ್ಕೆಯಾದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸೋಲಿಸುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.

ಆರಂಭಿಕ ಕೆಲವು ಸುತ್ತುಗಳಲ್ಲಿ ಖೂಬಾ ಮುನ್ನಡೆ ಸಾಧಿಸಿದ್ರೂ ಕೂಡ ನಂತರದ ಸುತ್ತುಗಳಲ್ಲಿ ಸಾಗರ್ ಖಂಡ್ರೆ ಮುನ್ನಡೆ ಸಾಧಿಸುತ್ತಾ ಬಂದಿದ್ದರು. ಕೊನೆಗೆ ಸಾಗರ್ ಖಂಡ್ರೆ ಅವರು ಕೇಂದ್ರ ಸಚಿವ ಭಗವಂತ ಖೂಬಾ ಅವರ ವಿರುದ್ಧ ಒಂದು ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಜಯದ ನಗೆ ಬೀರಿದ್ದಾರೆ.