ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿ, ವರದಿ ಸಲ್ಲಿಸಲು ರಚಿಸಲಾಗಿದ್ದ 7ನೇ ವೇತನ ಆಯೋಗದ ಅವಧಿ ಮಾ.15ಕ್ಕೆ ಮುಕ್ತಾಯವಾಗಿದ್ದು, ಶನಿವಾರ ಬೆಳಗ್ಗೆ ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಕೆ ಮಾಡಿದರು.
ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನ ಜಾರಿಗೆಬರುವುದು ಅನುಮಾನವಾಗಿದ್ದುಜೂನ್ ಬಳಿಕವೇ ಇದಕ್ಕೆ ಉತ್ತರ ಸಿಗಲಿದೆ.
ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ 2022ರ ನವೆಂಬರ್ 19ರಂದು 7ನೇ ವೇತನ ಆಯೋಗ ರಚಿಸಲಾಗಿತ್ತು ಬಳಿಕ ಅವಧಿಯನ್ನು 2023 ಮೇ 15ರಿಂದ ನವೆಂಬರ್ 18ರವರೆಗೆ ವಿಸ್ತರಿಸಲಾಗಿತ್ತು. ನಂತರ 2ನೇ ಬಾರಿ ಇದೇ ಮಾರ್ಚ್ 15ರವರೆಗೆ ವಿಸ್ತರಿಸಲಾಗಿತ್ತು. ಇಂದು ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿದ್ದಾರೆ.
ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿತು. ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾ ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು .