Friday, 20th September 2024

ಸನ್ಮಾನ ಕಾರ್ಯಕ್ರಮ

ಹುಬ್ಬಳ್ಳಿ: ಎಚ್‌ಸಿಜಿ ಎನ್‌ಎಂಆರ್‌ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಲ್ಲಿ ವೃತ್ತಿಯಲ್ಲಿರುವ 10 ಮಹಿಳಾ ಪೌರಕಾರ್ಮಿಕರ ಗಮನಾರ್ಹ ಕೊಡುಗೆಯನ್ನು ಸ್ಮರಿಸಿ ಶಾಸಕ ಪ್ರಸಾದ್ ಅಬ್ಬಯ್ಯ ಸನ್ಮಾನಿಸಿದರು.

ಹುಬ್ಬಳ್ಳಿಯ ಎಚ್‌ಸಿಜಿ ಎನ್‌ಎಂಆರ್ ಕ್ಯಾನ್ಸರ್ ಸೆಂಟರ್ ಆವರಣದಲ್ಲಿ ಸನ್ಮಾನ ಕಾರ್ಯಕ್ರಮವನ್ನು ನಡೆಸಲಾಯಿತು.

ಸಮುದಾಯದ ಸುಧಾರಣೆಗೆ ಈ ಮಹಿಳೆಯರ ಅಮೂಲ್ಯ ಕೊಡುಗೆಗಳನ್ನು ಗುರುತಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು. ಈ ವೇಳೆ ಯುವ ಮುಖಂಡ ಶ್ರೀ ರಜತ್ ಉಳ್ಳಾಗಡ್ಡಿಮಠ್, ಹೆಲ್ತ್‌ಕೇರ್ ಗ್ಲೋಬಲ್ ಎಂಟರ್ಪ್ರೈಸಸ್ ಲಿಮಿಟೆಡ್‌ನ ಕರ್ನಾಟಕ ಪ್ರಾದೇಶಿಕ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಮನೀಷಾ ಕುಮಾರ್, ಹುಬ್ಬಳ್ಳಿಯ ಎಚ್‌ಸಿಜಿ ಎನ್‌ಎಂಆರ್ ಕ್ಯಾನ್ಸರ್ ಸೆಂಟರ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಅಬ್ದುಲ್ ರಹೀಂ ಉಪಸ್ಥಿತರಿದ್ದರು.