Saturday, 23rd November 2024

ಅಶ್ಲೀಲ ವಿಡಿಯೋ ಪ್ರಕರಣ: ಭವಾನಿ ರೇವಣ್ಣ ಸಂಬಂಧಿ ಜೈಲುಪಾಲು

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಂಬಂಧಿ ಸತೀಶ್ ಬಾಬು ಜೈಲುಪಾಲಾಗಿ ದ್ದಾರೆ.

ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆಯಾಗಿರುವ ನನ್ನ ತಾಯಿಯನ್ನು ಅಪಹರಿಸಿದ್ದಾರೆ ಎಂದು ಮಹಿಳೆಯ ಮಗ ಮೈಸೂರು ಕೆ.ಆರ್.ನಗರ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಹೆಚ್.ಡಿ.ರೇವಣ್ಣ ಹಾಗೂ ಸತೀಶ್ ಬಾಬು ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸತೀಶ್ ಬಾಬುಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.