Thursday, 12th December 2024

ಸುರತ್ಕಲ್: ಇಂದು ಶಾಲೆ-ಕಾಲೇಜುಗಳಿಗೆ ರಜೆ

ಮಂಗಳೂರು : ಸುರತ್ಕಲ್ ನಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಸುರತ್ಕಲ್ ವ್ಯಾಪ್ತಿಯಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಜಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ನಾಲ್ಕು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಸುರತ್ಕಲ್, ಪೆಣಂಬೂರು, ಬಜ್ಪೆ, ಮುಲ್ಕಿಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಫಾಜಿಲ್ ಸುರತ್ಕಲ್ ನ ಬಟ್ಟೆ ಖರೀದಿಗೆಂದು ಅಂಗಡಿಯೊಂದಕ್ಕೆ ತೆರಳಿದ್ದ ಈ ವೇಳೆ ರಾತ್ರಿ 8 ಗಂಟೆ ಸುಮಾರಿಗೆ ಈ ದಾಳಿ ಮಾಡಿ ದುಷ್ಕರ್ಮಿಗಳು ಫಾಜಿಲ್ ನನ್ನು ಹತ್ಯೆ ಮಾಡಿದ್ದಾರೆ.