Saturday, 14th December 2024

ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆಗಳು ಆರಂಭ

ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರ ಇಂದಿನಿಂದ ಆರಂಭವಾಗಲಿದ್ದು, ರಾಜ್ಯದಾತ್ಯಂತ 1124 ಕೇಂದ್ರ ಗಳಲ್ಲಿ 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮೊದಲ ದಿನ ಕನ್ನಡ ಮತ್ತು ಅರೇಬಿಕ್ ವಿಷಯದ ಪರೀಕ್ಷೆಗಳು ನಡೆಯಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಪಡೆದ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ.

ಮಾ.1 ರಿಂದ ಮಾರ್ಚ್‌ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಈ ಅವಧಿಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಿಎಂಟಿಸಿ, ಕೆಎಸ್‌ ಆರ್‌ ಟಿಸಿಯ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಪರೀಕ್ಷೆಗಳು ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿವೆ.

01-03-2024 : ಶುಕ್ರವಾರ ಕನ್ನಡ ಹಾಗೂ ಅರೇಬಿಕ್

04-03-2024 : ಸೋಮವಾರ ಗಣಿತ

05-03-2024 : ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ

06-03-2024 : ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್ ಪರೀಕ್ಷೆ

07-03-2024 : ಇತಿಹಾಸ ಹಾಗೂ ಭೌತಶಾಸ್ತ್ರ

09-03-2024 : ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ

11-03-2024 : ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ

13-03-2024 : ಇಂಗ್ಲಿಷ್ ಪರೀಕ್ಷೆ

15-03-2024 : ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ

16-03-2024 : ಅರ್ಥಶಾಸ್ತ್ರ

18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ

20-03-2024 : ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

22-03-2024 : ಹಿಂದಿ ಪರೀಕ್ಷೆ