Saturday, 27th July 2024

ಕೊಡಗಿನಲ್ಲಿ ನಾಲ್ಕು ದಿನ ನಿಷೇಧಾಜ್ಞೆ ಜಾರಿ

ಡಿಕೇರಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಇತ್ತ ಕೊಡಗಿನಲ್ಲಿ ನಡೆದ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಕೂಡ ಬೃಹತ್ ಮೆರವಣಿಗೆ ಆಯೋಜಿಸಿದೆ.

ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಬಿಜೆಪಿ ಕೂಡ ಸಮಾವೇಶ ನಡೆಸುತ್ತಿದೆ. ಈ ಹಿನ್ನೆಲೆ ಕೊಡಗಿ ನಲ್ಲಿ ನಾಲ್ಕು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಆ.26 ರಂದು ಕಾಂಗ್ರೆಸ್ ಪ್ರತಿಭಟನೆ ಮತ್ತು ಬಿಜೆಪಿಯಿಂದ ‘ಜನ ಜಾಗೃತಿ ಸಮ್ಮೇಳನ’ ನಡೆಯಲಿದೆ. ಈ ಹಿನ್ನೆಲೆ ಪೂರ್ವಭಾವಿ ಯಾಗಿ ಕೊಡಗು ಜಿಲ್ಲೆಯಲ್ಲಿ ನಾಲ್ಕು ದಿನ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ನಾಳೆಯಿಂದ ಅಂದರೆ, ಆ.24 ರ ಬೆಳಗ್ಗೆ 6 ಗಂಟೆಯಿಂದ ಆಗಸ್ಟ್ 27 ರ ಸಂಜೆ 6 ರವರೆಗೆ ಕೊಡಗು ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಯಿರಲಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಡಾ.ಸತೀಶ ಬಿ.ಸಿ. ಆದೇಶ ಹೊರಡಿಸಿದ್ದಾರೆ.

ಯಾವುದೇ ಪ್ರತಿಭಟನೆ, ಜಾಥಾ, ಮೆರವಣಿಗೆ, ಕಪ್ಪುಬಾವುಟ ಪ್ರದರ್ಶನ ಮಾಡುವುದನ್ನು ನಿಷೇಧಿಸಲಾಗಿದೆ. ಐದು ಮತ್ತು ಅದಕ್ಕಿಂತ ಹೆಚ್ಚಿನ ಜನರು ಒಂದೆಡೆ ಸೇರದಂತೆ ನಿರ್ಬಂಧ ವಿಧಿಸಲಾಗಿದೆ.

error: Content is protected !!