ಜಿಲ್ಲಾಡಳಿತದಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಆಗಸ್ಟ್ 18, 2022ರವರೆಗೆ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಗೊಳಿಸಲಾಗಿದೆ. ಶಾಂತಿ-ಸುವ್ಯವಸ್ಥೆ ದೃಷ್ಠಿಯಿಂದ ಈ ಕೆಳಗಿನ ನಿಯಮ ಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ.
05 ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ನಿರ್ಬಂಧಿಸಿದೆ. ಯಾವುದೇ ಮೆರವಣಿಗೆ, ಸಭೆ, ಸಮಾರಂಬ ಮತ್ತು ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶಗಳನ್ನು ನಿಷೇಧಿಸ ಲಾಗಿದೆ. ಯಾವುದೇ ರೀತಿ ಆಯುಧ ಹಾಗೂ ಮಾರಕಾಸ್ತ್ರಗಳನ್ನು ಹಾಗೂ ಸ್ಪೋಟಕ ಗಳನ್ನು ತೆಗೆದುಕೊಂಡು ಹೋಗುವುದು ಮತ್ತು ಸಂಗ್ರಹಿಸುವುದು ನಿಷೇಧಿಸಲಾಗಿದೆ.
ವ್ಯಕ್ತಿ / ಶವಗಳ ಪ್ರತಿಕೃತಿಗಳನ್ನು ಪ್ರದರ್ಶನ / ದಹನ ಮಾಡುವುದು ಮತ್ತು ಪ್ರಚೋದನಕಾರಿ ಘೋಷಣೆ ಹಾಗೂ ಭಿತ್ತಿಚಿತ್ರ ಗಳನ್ನು ತೋರಿಸುವುದು ನಿಷೇಧಿಸಲಾಗಿದೆ. ದ್ವಿ ಚಕ್ರ ವಾಹನ ಸವಾರರು ಹಿಂಬದಿಯಲ್ಲಿ 40 ವರ್ಷಕ್ಕಿಂತ ಕಿರಿಯ ವಯಸ್ಸಿನ ಗಂಡಸರನ್ನು ಕೂರಿಸಿಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ರಾತ್ರಿ 09ರಿಂದ ಬೆಳಗಿನ ಜಾವ 05:00 ರವೆಗೆ ದ್ವಿ ಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ.