Sunday, 19th May 2024

ನಾಳೆ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ

ಶಿವಮೊಗ್ಗ : ಜಿಲ್ಲೆಯಲ್ಲಿರುವ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ 6ಗಂಟೆಯಿಂದ 144 ಸೆಕ್ಷನ್ ಅಡಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಸೋಮವಾರ 10ನೇ ತರಗತಿವರೆಗೆ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಚಟುವಟಿಕೆಗಳ ಸುಗಮ ನಿರ್ವಹಣೆಗಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರೌಢಶಾಲೆಗಳ ಆವರಣದಿಂದ 200ಮೀಟರ್ ಒಳಗಡೆ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ, ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಹೋಗಲು ಜಿಲ್ಲಾಡಳಿತ ದೊಂದಿಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

error: Content is protected !!