Friday, 13th December 2024

ಬೆಂಗಳೂರಲ್ಲಿ ನಾಳೆ ಸಂಜೆ 6 ಗಂಟೆಯಿಂದ ನಿಷೇಧಾಜ್ಞೆ ಜಾರಿ

ಬೆಂಗಳೂರು: ಏ.26ರಂದು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗಾಗಿ ಮೊದಲ ಹಂತದ ಮತದಾನ ನಡೆಯಲಿದೆ.

ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಲ್ಲಿ ನಾಳೆ ಸಂಜೆ 6 ಗಂಟೆಯಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ, ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ.

ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ನಾಳೆ ಸಂಜೆ 6 ಗಂಟೆಯಿಂದ ಬೆಂಗಳೂರು ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಐದು ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚುವರಿ ಭದ್ರತೆ ಕೈಗೊಳ್ಳಲಾಗಿದೆ ಎಂದಿ ದ್ದಾರೆ.

ನಾಳೆ ಸಂಜೆ 6 ಗಂಟೆಯಿಂದ ಏಪ್ರಿಲ್.26ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಮದ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ಬೆಂಗಳೂರಿನ ಐದು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.