Friday, 20th September 2024

ನಗರಸಭಾ ಅಧ್ಯಕ್ಷರಾಗಿ ಜಗನ್ನಾಥ್ ಉಪಾಧ್ಯಕ್ಷರಾಗಿ ರಾಣಿಯಮ್ಮಅವಿರೋಧ ಆಯ್ಕೆ  

ಕಣಕ್ಕೆ ಇಳಿಯದ ಜೆಡಿಎಸ್ ಪಕ್ಷದ ಸದಸ್ಯರು : ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು

ಚಿಂತಾಮಣಿ: ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಾರ್ಡ್ ನಂಬರ್ ೦೭ರ ನಗರಸಭಾ ಸದಸ್ಯ ಆರ್ ಜಗನ್ನಾಥ್,ಉಪಾಧ್ಯಕ್ಷರಾಗಿ ವಾರ್ಡ್ 27ರ ರಾಣಿಯಮ್ಮ ಅವಿರೋಧ ಆಯ್ಕೆಯಾದರು.

ಚಿಂತಾಮಣಿ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಚುನಾವಣಾ ಧಿಕಾರಿಯಾದ ಉಪವಿಭಾಗಾಧಿಕಾರಿ ಅಶ್ವಿನ್ ಭಾಗವಹಿಸಿ ಶಾಂತವಾಗಿ ಚುನಾವಣೆಯನ್ನು ನಡೆಸಿಕೊಟ್ಟರು.

ಸಚಿವ ಎಂ.ಸಿ. ಸುಧಾಕರ್ ಬೆಂಬಲಿತ ನಗರಸಭಾ ಸದಸ್ಯ ಆರ್ ಜಗನ್ನಾಥ್,ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ರಾಣಿ ಯಮ್ಮ ನಾಮಪತ್ರ ಸಲ್ಲಿಸಿದ್ದು ಬೇರೆ ಯಾರು ಸಹ ನಾಮಪತ್ರ ಸಲ್ಲಿಸದೆ ಇರುವ ಕಾರಣಕ್ಕೆ ಅಧ್ಯಕ್ಷ ಮತ್ತು ಉಪಾ ಧ್ಯಕ್ಷರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಘೋಷಣೆ ಮಾಡಿದರು.

ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ!ಎಂ ಸಿ ಸುಧಾಕರ್ ತಮ್ಮ ಬೆಂಬಲಿತ ನಗರಸಭಾ ಸದಸ್ಯರೊಂದಿಗೆ ನಗರ ಸಭೆಗೆ ಆಗಮಿಸಿ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಹೂವಿನ ಹಾರ ಹಾಕಿ ಶುಭ ಹಾರೈಸಿದಮಾತನಾಡಿದರು.

ನಗರಸಭಾ ಚುನಾವಣೆಯಲ್ಲಿ ವಿರೋಧ ಪಕ್ಷದ ಸದಸ್ಯರು ನಾಮಪತ್ರ ಸಲ್ಲಿಸದೆ ಕಾಂಗ್ರೆಸ್ ಪಕ್ಷದ ನಮ್ಮ ನಗರಸಭಾ ಸದಸ್ಯರನ್ನು ಅವಿರೋಧ ಆಯ್ಕೆ ಮಾಡಿರೋದಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದ ಅವರ ಎಲ್ಲಾ ನಗರ ಸಭಾ ಸದಸ್ಯರು ಒಟ್ಟಾಗಿ ಸೇರಿ ಚಿಂತಾಮಣಿ ನಗರವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗೋಣ. ರಾಜ್ಯಕ್ಕೆ ಮಾದರಿಯಾದ ನಗರಸಭೆ ಮಾಡೋಣ ಎಂದು  ಹೇಳಿದರು.

ನಗರಸಭೆ ಕಾಂಗ್ರೆಸ್ ವಶವಾದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ನಗರಸಭೆ ಮುಂಭಾಗ ಪಟಾಕಿ ಸಿಡಿಸಿ ಸಿಹಿಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಜಗದೀಶ್.ರಾಜಾಚಾರಿ.ಹರೀಶ್.ಅಕ್ಷಯ್,ಸೇರಿದಂತೆ ಎಲ್ಲಾ ನಗರಸಭಾ ಸದಸ್ಯರುಗಳು ಕಾಂಗ್ರೆಸ್ ಮುಖಂಡರುಗಳು ಭಾಗವಹಿಸಿದ್ದರು.